ಪರಿಷತ್ ಸದಸ್ಯರಾಗಿ ಬಿ.ಬಿ.ಶಿವಪ್ಪ ನಾಮನಿರ್ದೇಶನ
ಬಿಜೆಪಿಯ ಹಿರಿಯ ನಾಯಕ ಬಿ.ಬಿ.ಶಿವಪ್ಪ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ರಾಜ್ಯ ಸರ್ಕಾರ ಶುಕ್ರವಾರ ನಾಮ...
ಬೆಂಗಳೂರು: ಬಿಜೆಪಿಯ ಹಿರಿಯ ನಾಯಕ ಬಿ.ಬಿ.ಶಿವಪ್ಪ ಅವರನ್ನು ವಿಧಾನ ಪರಿಷತ್ ಸದಸ್ಯರನ್ನಾಗಿ ರಾಜ್ಯ ಸರ್ಕಾರ ಶುಕ್ರವಾರ ನಾಮ ನಿರ್ದೇಶನ ಮಾಡಿದೆ.
ವಿಜಯ್ ಸಂಕೇಶ್ವರ್ ಅವರ ರಾಜಿನಾಮೆಯಿಂದ ತೆರವಾಗಿದ್ದ ಪರಿಷತ್ ಸದಸ್ಯ ಸ್ಥಾನಕ್ಕೆ ಸರ್ಕಾರ ಶಿವಪ್ಪ ಅವರನ್ನು ನಾಮ ನಿರ್ದೇಶನಗೊಳಿಸಿ, ರಾಜ್ಯಪಾಲರಿಗೆ ಶಿಫಾರಸು ಮಾಡಿದೆ. ಇತ್ತೀಚಿಗಷ್ಟೆ ಸಂಕೇಶ್ವರ್ ಅವರು ಬಿಜೆಪಿ ತೊರೆದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದ ಕೆಜೆಪಿ ಸೇರಿದ್ದರು.
ಬಿಜೆಪಿಯ ಹಿರಿಯರ ವೇದಿಕೆ ಕಟ್ಟಿಕೊಂಡಿದ್ದ ಶಿವಪ್ಪ, ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ವೇಳೆ, ಅವರ ವಿರುದ್ಧ ಹಲವು ಬಾರಿ ಬಹಿರಂಗವಾಗಿಯೇ ವಾಗ್ದಾಳಿ ನಡೆಸಿದ್ದರು.