ಬೆಂಗಳೂರಿನಲ್ಲಿ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ
ಬೆಂಗಳೂರು: 19 ವರ್ಷದ ಯುವತಿಯ ಮೇಲೆ ಅಪರಿಚಿತ ವ್ಯಕ್ತಿಗಳು ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ನಗರದ ಕಾಡುಗೊಂಡನಹಳ್ಳಿ ವ್ಯಾಪ್ತಿಯಲ್ಲಿ ನಡೆದಿದೆ.
ಕಳೆದ ರಾತ್ರಿ ಯುವತಿ ಅಕ್ಕನ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಅಪರಿಚಿತ ವ್ಯಕ್ತಿಗಳು ಆಕೆ ಮೇಲೆ ಅತ್ಯಾಚಾರವೆಸಗಿದ್ದಾರೆಂದು ಯುವತಿಯ ತಂದೆ ಶುಕ್ರವಾರ ಪೊಲೀಸ್ ಠಾಣೆಯಲ್ಲಿ ದೂರ ದಾಖಲಿಸಿದ್ದಾರೆ.
ಯುವತಿಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದು, ತನಿಖೆ ಕೈಗೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.