ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಲೋಕಪಾಲ ವಿಚಾರದಲ್ಲಿ ಸರ್ಕಾರ ಮೋಸ ಮಾಡಿದೆ: ಅಣ್ಣಾ

ಪರಿಷ್ಕೃತ ಲೋಕಪಾಲ ಮಸೂದೆಗೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಅವರು, ಲೋಕಪಾಲ..

Lingaraj Badiger
Updated On : 1 Feb 2013, 4:04 am

ನವದೆಹಲಿ: ಪರಿಷ್ಕೃತ ಲೋಕಪಾಲ ಮಸೂದೆಗೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಅವರು, ಲೋಕಪಾಲ ವಿಚಾರದಲ್ಲಿ ಕೇಂದ್ರ ಸರ್ಕಾರ ನಮಗೆ ನಂಬಿಕೆದ್ರೋಹ ಮಾಡಿದೆ ಎಂದು ಶುಕ್ರವಾರ ಆರೋಪಿಸಿದ್ದಾರೆ.

ಇಂದು ದೆಹಲಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅಣ್ಣಾ, ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರು ನೀಡಿದ್ದ ಯಾವುದೇ ಭರವಸೆಗಳನ್ನು ತಿದ್ದುಪಡಿಯಲ್ಲಿ ಸೇರಿಸಿಲ್ಲ. ಜನಸಾಮಾನ್ಯರಿಗೆ ಈ ತಿದ್ದುಪಡಿ ಮಸೂದೆಯಿಂದ ಯಾವುದೇ ಪ್ರಯೋಜನವಿಲ್ಲ. ಸರ್ಕಾರ ದೇಶದ ಜನತೆಯ ದಿಕ್ಕು ತಪ್ಪಿಸುತ್ತಿದೆ ಎಂದರು.

ಸಿಬಿಐ ಮತ್ತು ಸಿವಿಸಿಗೆ ಸ್ವಾಯತ್ತತೆ ನೀಡುವ ಬಗ್ಗೆ ಹಾಗೂ ಎಲ್ಲ ಸರ್ಕಾರಿ ಉದ್ಯೋಗಿಗಳನ್ನು ಲೋಕಪಾಲ ಮಸೂದೆ ವ್ಯಾಪ್ತಿಗೆ ಒಳಪಡಿಸುವ ಬಗ್ಗೆ ಪರಿಷ್ಕೃತ ಲೋಕಪಾಲ ಮಸೂದೆಯಲ್ಲಿ ಯಾವುದೇ ಪ್ರಸ್ತಾವಾಗಿಲ್ಲ ಎಂದು ಅಣ್ಣಾ ದೂರಿದ್ದಾರೆ.

ಸರ್ಕಾರ ಬಲಿಷ್ಠ ಲೋಕಪಾಲ ಮಸೂದೆ ಜಾರಿಗೆ ತಂದಿದ್ದೇಯಾದರೆ ನಾನು ಸರ್ಕಾರವನ್ನು ಅಭಿನಂದಿಸುತ್ತೇನೆ. ಇಲ್ಲದಿದ್ದರೆ ಸರ್ಕಾರ ನಮಗೆ ನೀಡಿದ್ದ ಭರವಸೆಗಳನ್ನು ಈಡೇರಿಸಿಲ್ಲ ಎಂದು ದೇಶದ ಜನತೆಗೆ ತಿಳಿಸುತ್ತೇವೆ ಎಂದರು.

ಉತ್ತಮ ಅಭ್ಯರ್ಥಿಗಳು ಸಂಸತ್ತಿಗೆ ಆಯ್ಕೆಯಾಗುವವರಗೆ ನಮಗೆ ನ್ಯಾಯ ಸಿಗುವುದಿಲ್ಲ ಮತ್ತು ಜನಲೋಕಪಾಲ ಮಸೂದೆ ಜಾರಿಗೆ ಬರುವುದಿಲ್ಲ. ಈ ಕುರಿತು ಜನರಲ್ಲಿ ಜಾಗೃತಿ ಮೂಡಿಸಲು ನಾನು ನಿನ್ನೆಯಿಂದ ಪ್ರವಾಸ ಆರಂಭಿಸಿದ್ದೇನೆ. ದೇಶಾದ್ಯಂತ ಪ್ರವಾಸ ಮಾಡಿ ಸರ್ಕಾರದ ಅಕ್ರಮದ ಬಗ್ಗೆ ಅರಿವು ಮೂಡಿಸುತ್ತೇನೆ. ಇದರಿಂದ ಸರ್ಕಾರ ಎಚ್ಚೆತ್ತುಕೊಳ್ಳದಿದ್ದರೆ ಮತ್ತೆ ರಾಮಲೀಲಾ ಮೈದಾನದಲ್ಲಿ ಸತ್ಯಾಗ್ರಹ ನಡೆಸುವುದಾಗಿ ಅಣ್ಣಾ ಎಚ್ಚರಿಸಿದರು.

ರಾಜ್ಯಗಳಿಂದಲೇ ಲೋಕಾಯುಕ್ತ ನೇಮಕ, ಲೋಕಪಾಲರ ಮೇಲ್ವಿಚಾರಣೆಯಡಿ ಸಿಬಿಐ, ಲೋಕಪಾಲರ ಆಯ್ಕೆ ಹಾಗೂ ನೇಮಕಕ್ಕೆ ರಾಷ್ಟ್ರಪತಿಗಳ ಒಪ್ಪಿಗೆ ಕಡ್ಡಾಯ ಸೇರಿದಂತೆ ಹಲವು ತಿದ್ದುಪಡಿಗಳೊಂದಿಗೆ ನಿನ್ನೆ ಪರಿಷ್ಕೃತ ಲೋಕಪಾಲ ಮಸೂದೆಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ಸೂಚಿಸಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement