'ಸತ್ಯಾನಂದ' ಚಿತ್ರ ಬಿಡುಗಡೆಗೆ ಗ್ರೀನ್ ಸಿಗ್ನಲ್
ಬೆಂಗಳೂರು: ಸತ್ಯಾನಂದ ಚಿತ್ರ ಬಿಡುಗಡೆಗೆ ನಿರ್ಬಂಧ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರಿನ ಸಿಟಿ ನ್ಯಾಯಾಲಯ ಶುಕ್ರವಾರ ವಜಾಗೊಳಿಸಿದೆ.
ಕಳೆದ ಹಲವಾರು ತಿಂಗಳಿನಿಂದ ಸತ್ಯಾನಂದ ಚಿತ್ರ ಬಿಡುಗಡೆಗೆ ತಡೆವೊಡ್ಡಿದ್ದು, ಪ್ರಕರಣ ನ್ಯಾಯಾಲದ ಮೆಟ್ಟಿಲೇರಿತ್ತು. ಬಿಡದಿ ಆಶ್ರಮದ ನಿತ್ಯಾನಂದ ತಮ್ಮ ಹೆಸರಿಗೆ ಸಮೀಪವಾಗಿರುವಂತಹ ಹೆಸರನ್ನು ಚಿತ್ರಕ್ಕೆ ಇಡಲಾಗಿದೆ. ಆದ್ದರಿಂದ ಚಿತ್ರ ಬಿಡುಗಡೆಗೆ ಅನುಮತಿ ನೀಡಬಾರದು ಎಂದು ತಕಾರಾರು ಅರ್ಜಿ ಸಲ್ಲಿಸಿದ್ದರು.
ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಚಿತ್ರ ಬಿಡುಗಡೆಗೆ ಅನುಮತಿ ನೀಡಿದ್ದು, ಚಿತ್ರದ ಹೆಸರು ಬದಲಿಸುವಂತೆ ಸೂಚಿಸಿದೆ.
ಕನ್ನಡ, ತಮಿಳು ಮತ್ತು ತೆಲುಗು ಭಾಷೆಗಳಲ್ಲಿ ಚಿತ್ರ ಬಿಡುಗಡೆಗೆ ನ್ಯಾಯಾಲಯ ಅನುಮತಿ ನೀಡಿದೆ.
ಸತ್ಯಾನಂದ ಚಿತ್ರದ ನಿರ್ದೇಶಕ ಮದನ್ ಪಟೇಲ್ ಅವರು ನ್ಯಾಯಾಲಯದ ತೀರ್ಪನ್ನು ಸ್ವಾಗತಿಸಿದ್ದಾರೆ.