ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಇಶ್ರತ್ ನಕಲಿ ಎನ್‌ಕೌಂಟರ್: ಸಿಬಿಐಯಿಂದ ನಾಳೆ ಆರೋಪಪಟ್ಟಿ ಸಲ್ಲಿಕೆ

ಇಶ್ರತ್ ಜಹಾನ್ ನಕಲಿ ಎನ್‌ಕೌಂಟರ್ ಪ್ರಕರಣ ಬಗ್ಗೆ ಸಿಬಿಐ ಬುಧವಾರ ಆರೋಪಪಟ್ಟಿ ಸಲ್ಲಿಸಲಿದೆ ಎಂದು ಬಲ್ಲಮೂಲಗಳು ಹೇಳಿವೆ...

Rashmi Kasaragodu
Updated On : 2 Jul 2013, 7:57 am

ನವದೆಹಲಿ: ಇಶ್ರತ್ ಜಹಾನ್ ನಕಲಿ ಎನ್‌ಕೌಂಟರ್ ಪ್ರಕರಣ ಬಗ್ಗೆ ಸಿಬಿಐ ಬುಧವಾರ ಆರೋಪಪಟ್ಟಿ ಸಲ್ಲಿಸಲಿದೆ ಎಂದು ಬಲ್ಲಮೂಲಗಳು ಹೇಳಿವೆ. ಅಹಮದಾಬಾದ್ ಸ್ಪೆಷಲ್ ಕೋರ್ಟ್‌ನಲ್ಲಿ ಆರೋಪಪಟ್ಟಿ ಸಲ್ಲಿಸಲಾಗುವುದು.

ಬಲ್ಲಮೂಲಗಳ ಪ್ರಕಾರ ಆರೋಪಪಟ್ಟಿ ಸಲ್ಲಿಸಿದ ನಂತರ ಸಿಬಿಐ ಜುಲೈ 4ರಂದು ಗುಜರಾತ್ ಹೈಕೋರ್ಟ್‌ನಲ್ಲಿ ಸ್ಟಾಟಸ್ ರಿಪೋರ್ಟ್ ಸಲ್ಲಿಸಲಿದೆ.

ಆದಾಗ್ಯೂ, ಸಿಬಿಐ ತನ್ನ ಆರೋಪಪಟ್ಟಿಯಲ್ಲಿ ಗುಪ್ತಚರ ಸಂಸ್ಥೆ ವಿಶೇಷ ನಿರ್ದೇಶಕ, ಹಿರಿಯ ಐಪಿಎಸ್ ಅಧಿಕಾರಿ ರಾಜೇಂದ್ರ ಕುಮಾರ್ ಅವರ ಹೆಸರನ್ನು ಸೇರಿಸಿಲ್ಲ ಎಂದು ಹೇಳಲಾಗುತ್ತಿದೆ.

ಪ್ರಸ್ತುತ ಪ್ರಕರಣದಲ್ಲಿ ನೇರ ಭಾಗಿಯಾಗಿರುವವರನ್ನು ಮಾತ್ರ ಈ ಆರೋಪಪಟ್ಟಿಯಲ್ಲಿ ಸೇರಿಸಲಾಗುವುದು ಎಂದು ಸಿಬಿಐ ನಿರ್ದೇಶಕ ಸಿಂಹ ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement