ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಮಣಿಪಾಲ ಗ್ಯಾಂಗ್‌ರೇಪ್: ಮತ್ತಿಬ್ಬರು ಆರೋಪಿಗಳ ಬಂಧನ

ಮಣಿಪಾಲ ವಿವಿಯ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ ಸಂಬಂಧ..

Lingaraj Badiger
Updated On : 2 Jul 2013, 1:13 am

ಉಡುಪಿ: ಮಣಿಪಾಲ ವಿವಿಯ ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣ ಸಂಬಂಧ ಮತ್ತೆ ಇಬ್ಬರು ಆರೋಪಿಗಳನ್ನು ಮಣಿಪಾಲ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

ಸಾಕ್ಷ್ಯ ನಾಶಪಡಿಸಿದ ಆರೋಪದ ಮೇಲೆ ಪ್ರಕರಣದ ಪ್ರಮುಖ ಆರೋಪಿಯಾದ ಹರಿಪ್ರಸಾದ್ ಸಹೋದರ ಹರೀಂದ್ರ ಹಾಗೂ ಮತ್ತೊಬ್ಬ ಆರೋಪಿ ಯೋಗೀಶ್ ಸಹೋದರ ಬಾಲಚಂದ್ರನನ್ನು ಬಂಧಿಸಲಾಗಿದೆ ಎಂದು ಪಶ್ಚಿಮ ವಲಯ ಐಜಿಪಿ ಪ್ರತಾಪ್ ರೆಡ್ಡಿ ಅವರು ಹೇಳಿದ್ದಾರೆ.

ಈ ಇಬ್ಬರು ಆರೋಪಿಗಳನ್ನು ಗೌಪ್ಯ ಸ್ಥಳದಲ್ಲಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಪ್ರತಾಪ್ ರೆಡ್ಡಿ ಮಾಧ್ಯಮಕ್ಕೆ ತಿಳಿಸಿದ್ದಾರೆ.

ಭಾರಿ ಸದ್ದು ಮಾಡಿದ್ದ ಈ ಗ್ಯಾಂಗ್‌ರೇಪ್ ಪ್ರಕರಣ ಸಂಬಂಧ ಕಳೆದ ಗುರುವಾರ ಹರಿಪ್ರಸಾದ್ ಹಾಗೂ ಯೋಗೀಶ್ ಸೇರಿದಂತೆ ಮೂವರು ಪ್ರಮುಖ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಇದೀಗ ಈ ಆರೋಪಿಗಳಿಗೆ ಸಹಕರಿಸಿದ ಹಾಗೂ ಸಾಕ್ಷ್ಯ ನಾಶ ಮಾಡಿದ ಅವರ ಸಹೋದರರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement