ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಆರೋಪಪಟ್ಟಿಯಲ್ಲಿ ಮೋದಿ, ಅಮಿತ್ ಶಾ ಹೆಸರಿಲ್ಲ

ವಿವಾದಾತ್ಮಕವಾಗಿರುವ ಇಶ್ರತ್ ಜಹಾನ್ ನಕಲಿ ಎನ್‌ಕೌಂಟರ್ ಪ್ರಕರಣದಲ್ಲಿ ಸಿಬಿಐ ಸಲ್ಲಿಸಿರುವ ಆರೋಪ ಪಟ್ಟಿಯಲ್ಲಿ ಗುಜರಾತ್...

Rashmi Kasaragodu
Updated On : 3 Jul 2013, 5:38 am

ಅಹಮದಾಬಾದ್: ವಿವಾದಾತ್ಮಕವಾಗಿರುವ ಇಶ್ರತ್ ಜಹಾನ್ ನಕಲಿ ಎನ್‌ಕೌಂಟರ್ ಪ್ರಕರಣದಲ್ಲಿ ಸಿಬಿಐ ಸಲ್ಲಿಸಿರುವ ಆರೋಪ ಪಟ್ಟಿಯಲ್ಲಿ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಮತ್ತು ಮಾಜಿ ಸಚಿವ ಅಮಿತ್ ಶಾ ಅವರ ಹೆಸರೇ ಇಲ್ಲ ಎಂದು ಬಲ್ಲಮೂಲಗಳಿಂದ ತಿಳಿದು ಬಂದಿದೆ.

ಪ್ರಸ್ತುತ ಪ್ರಕರಣದ ಬಗ್ಗೆ ಸಿಬಿಐ ಬುಧವಾರ ಗುಜರಾತ್ ಹೈಕೋರ್ಟ್‌ಗೆ ಆರೋಪಪಟ್ಟಿ ಸಲ್ಲಿಸಿತ್ತು.

2004ರಲ್ಲಿ ಅಹಮದಾಬಾದ್‌ನ ಹೊರವಲಯದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಇಶ್ರತ್ ಜತೆ ಮೂವರನ್ನು ಪೊಲೀಸರು ಹತ್ಯೆಗೈದಿದ್ದರು. ಆದರೆ ಮುಂಬೈ ಮೂಲದ 19ರ ಹರೆಯದ ಇಶ್ರತ್ ಯಾವುದೇ ಉಗ್ರ ಸಂಘಟನೆಗಳಿಗೆ ಸೇರಿಲ್ಲ, ಈ ಎನ್‌ಕೌಂಟರ್ ನಕಲಿ ಎಂದು ಸಿಬಿಐ ಹೇಳಿದೆ.

ಅದೇ ವೇಳೆ ಇಶ್ರತ್ ಹೊರತು ಪಡಿಸಿ ಹತ್ಯೆಯಾಗಿರುವ ಮೂವರು ವ್ಯಕ್ತಿಗಳಿಗೆ ಉಗ್ರ ಸಂಘಟನೆಯ ಜತೆ ನಂಟು ಇದೆ ಎಂದು ಸಿಬಿಐ ಆರೋಪ ಪಟ್ಟಿಯಲ್ಲಿ ಉಲ್ಲೇಖಿಸಿದೆ.

ಪ್ರಾಣೇಶ್ ಪಿಳ್ಳೈ ಅಲಿಯಾಸ್ ಜಾವೇದ್ ಶೇಖ್, ಅಮ್ಜದ್ ಅಲಿ ರಾಣಾ ಮತ್ತು ಜೀಶನ್ ಜೋಹರ್ ಅಹಮದಾಬಾದ್‌ನಲ್ಲಿ ದಾಳಿ ನಡೆಸಲು ಸಂಚು ರೂಪಿಸಿದ್ದರು. ಆದರೆ ಅವರು ಮೋದಿಯವರನ್ನು ಹತ್ಯೆಗೈಯ್ಯಲು ಸಂಚು ಹೂಡಿಲ್ಲ ಎಂದು ಸಿಬಿಐ ಹೇಳಿದೆ. ಈ ಪ್ರಕರಣದಲ್ಲಿ ತಪ್ಪಿಸಿಕೊಳ್ಳುವುದಕ್ಕಾಗಿ ಪ್ರಾಣೇಶ್ ಇಶ್ರತ್‌ಳನ್ನು ಬಳಸಿದ್ದನು ಎಂದು ಆರೋಪಪಟ್ಟಿಯಲ್ಲಿ ಹೇಳಲಾಗಿದೆ.

ಇಶ್ರತ್ ಲಷ್ಕರೆ ತೊಯ್ಬಾ ಅಥವಾ ಇನ್ಯಾವುದೇ ಉಗ್ರ ಸಂಘಟನೆಗಳೊಂದಿಗೆ ಗುರುತಿಸಿಕೊಂಡಿಲ್ಲ. ಆದರೆ ಇನ್ನಿತರ ಆರೋಪಿಗಳು ಉಗ್ರ ಸಂಘಟನೆಯೊಂದಿಗೆ ನಂಟು ಹೊಂದಿದ್ದಾರೆ ಎಂದು ಗುಪ್ತಚರ ಸಂಸ್ಥೆ ಹೇಳಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement