ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಇಶ್ರತ್‌ಗೆ ಸಿಬಿಐ ಕ್ಲೀನ್‌ಚಿಟ್

ಇಶ್ರತ್ ನಕಲಿ ಎನ್‌ಕೌಂಟರ್ ಪ್ರಕರಣದಲ್ಲಿ ಇಶ್ರತ್ ಜಹಾನ್‌ಗೆ ಸಿಬಿಐ ಬುಧವಾರ ಕ್ಲೀನ್‌ಚಿಟ್ ನೀಡಿದೆ. ಪ್ರಸ್ತುತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಗುಜರಾತ್ ...

Rashmi Kasaragodu
Updated On : 3 Jul 2013, 3:20 am

ಅಹಮದಾಬಾದ್: ಇಶ್ರತ್ ನಕಲಿ ಎನ್‌ಕೌಂಟರ್ ಪ್ರಕರಣದಲ್ಲಿ ಇಶ್ರತ್ ಜಹಾನ್‌ಗೆ ಸಿಬಿಐ ಬುಧವಾರ ಕ್ಲೀನ್‌ಚಿಟ್ ನೀಡಿದೆ.

ಪ್ರಸ್ತುತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಗುಜರಾತ್ ಹೈಕೋರ್ಟ್‌ಗೆ ಬುಧವಾರ ಆರೋಪ ಪಟ್ಟಿ ಸಲ್ಲಿಸಲಿದೆ. ಇದರಲ್ಲಿ  ಇಶ್ರತ್ ಲಷ್ಕರೆ ತೊಯ್ಬಾ ಸಂಘಟನೆಗೆ ಸೇರಿದವಳಲ್ಲ ಎಂದು ಸಿಬಿಐ ಉಲ್ಲೇಖಿಸಿರುವುದಾಗಿ ಬಲ್ಲಮೂಲಗಳು ಹೇಳಿವೆ.

2004ರಲ್ಲಿ ಅಹಮದಾಬಾದ್‌ನ ಹೊರವಲಯದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಇಶ್ರತ್ ಜತೆ ಮೂವರನ್ನು ಪೊಲೀಸರು ಹತ್ಯೆಗೈದಿದ್ದರು. ಅದೇ ವೇಳೆ ಇಶ್ರತ್ ಹೊರತು ಪಡಿಸಿ ಹತ್ಯೆಯಾಗಿರುವ ಮೂವರು ವ್ಯಕ್ತಿಗಳಿಗೆ ಉಗ್ರ ಸಂಘಟನೆಯ ಜತೆ ನಂಟು ಇದೆ ಎಂದು ಸಿಬಿಐ ಆರೋಪ ಪಟ್ಟಿಯಲ್ಲಿ ಹೇಳಿದೆ.

ಆದಾಗ್ಯೂ, ಆರೋಪ ಪಟ್ಟಿಯಲ್ಲಿ ಗುಪ್ತಚರ ಸಂಸ್ಥೆಯ ಅಧಿಕಾರಿ ರಾಜೇಂದ್ರ ಕುಮಾರ್ ಅವರ ಹೆಸರನ್ನು ಸೇರಿಸಿರುವ ಸಾಧ್ಯತೆ ಇಲ್ಲ ಎಂದು ಹೇಳಲಾಗುತ್ತದೆ.  ಈ ಬಗ್ಗೆ ತನಿಖೆ ನಡೆಸಲು ಸಿಬಿಐ ಇನ್ನೊಂದಿಷ್ಟು ಕಾಲಾವಧಿ ಬೇಡುವ ಸಾಧ್ಯತೆಯೂ ಇದೆ ಎಂದು ಬಲ್ಲಮೂಲಗಳು ವರದಿ ಮಾಡಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement