ಮಂಡೇಲಾಗೆ ಕೃತಕ ಉಸಿರಾಟ ಅಳವಡಿಕೆ
ದಕ್ಷಿಣ ಆಫ್ರಿಕಾದ ಮಾಜಿ ಅಧ್ಯಕ್ಷ ನೆಲ್ಸನ್ ಮಂಡೇಲಾ ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಚಿಂತಾಜನಕವಾಗಿದ್ದು, ಅವರಿಗೆ ..
ಜೊಹಾನ್ಸ್‌ಬರ್ಗ್: ದಕ್ಷಿಣ ಆಫ್ರಿಕಾದ ಮಾಜಿ ಅಧ್ಯಕ್ಷ ನೆಲ್ಸನ್ ಮಂಡೇಲಾ ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಚಿಂತಾಜನಕವಾಗಿದ್ದು, ಅವರಿಗೆ ಕೃತಕ ಉಸಿರಾಟವನ್ನು ಅಳವಡಿಸಲಾಗಿದೆ ಎಂದು ಮಂಡೇಲಾ ಕುಟುಂಬದ ಸದಸ್ಯರು ತಿಳಿಸಿದ್ದಾರೆ.
ಜೀವರಕ್ಷಕ ಸಾಧನದ ಮೂಲಕವೇ ಮಂಡೇಲಾ ಅವರು ಉಸಿರಾಡುತ್ತಿದ್ದಾರೆ ಎಂದು ಅವರ ಕುಟುಂಬದ ಸದಸ್ಯರು ಕೋರ್ಟ್‌ಗೆ ಸಲ್ಲಿಸಿರುವ ವರದಿಯಲ್ಲಿ ತಿಳಿಸಿರುವುದಾಗಿ ಝಿನುವಾ ಸುದ್ದಿಸಂಸ್ಥೆ ವರದಿ ಮಾಡಿದೆ.
ಮಂಡೇಲಾ ಅವರ ಆರೋಗ್ಯದ ಸ್ಥಿತಿಗತಿ ಕುರಿತು ಅವರ ಕುಟುಂಬದ ಸದಸ್ಯರು ಇಸ್ಟರ್ನ್ ಕೇಪ್ ಹೈಕೋರ್ಟ್‌ಗೆ ವರದಿ ಸಲ್ಲಿಸಿದ್ದಾರೆ. ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿರುವ ಮಂಡೇಲಾ ಅವರನ್ನು ಕಳೆದ ಜೂನ್ 8ರಂದು ಪ್ರಿಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಜೂನ್ 23ರಿಂದ ಮಂಡೇಲಾ ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಕ್ಷೀಣಿಸಿತ್ತು.