ಲೈಂಗಿಕ ಕಿರುಕುಳ: ಮಧ್ಯಪ್ರದೇಶದ ಸಚಿವ ರಾಜಿನಾಮೆ
ಕೆಲಸಗಾರನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದ ಹಿನ್ನಲೆಯಲ್ಲಿ ಮಧ್ಯಪ್ರದೇಶದ ಹಣಕಾಸು ಸಚಿವ ರಾಘವ್ಜಿ ಶುಕ್ರವಾರ...
ಭೋಪಾಲ್: ಕೆಲಸಗಾರನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿ ಬಂದ ಹಿನ್ನಲೆಯಲ್ಲಿ ಮಧ್ಯಪ್ರದೇಶದ ಹಣಕಾಸು ಸಚಿವ ರಾಘವ್ಜಿ ಶುಕ್ರವಾರ ತಮ್ಮ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.
ರಾಘವ್ಜಿ ನನಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಅವರ ಕೆಲಸಗಾರನು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ಸಂಬಂಧ ಕೆಲಸಗಾರನು, ರಾಘವ್ಜಿ ನಡೆಸಿದ ಅಶ್ಲೀಲ ವರ್ತನೆಯ ಸಿಡಿಯನ್ನು ಪೊಲೀಸರಿಗೆ ನೀಡಿದ್ದಾರೆ.
ಸಿಡಿಯಲ್ಲಿ ಸಚಿವರ ಬಣ್ಣ ಬಯಲಾಗುತ್ತಿದ್ದಂತೆ, ಇತ್ತ ಅವರ ಸ್ಥಾನಕ್ಕೆ ರಾಜಿನಾಮೆ ನೀಡಬೇಕು ಎಂಬ ಒತ್ತಡ ಹೆಚ್ಚಾದ ಹಿನ್ನಲೆಯಲ್ಲಿ 79 ವರ್ಷದ ರಾಘವ್ಜಿ ಸಚಿವ ಸ್ಥಾನಕ್ಕೆ ರಾಜಿನಾಮೆ ನೀಡಿದ್ದಾರೆ.
ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌವ್ಹಾಣ್ ಅವರಿಗೆ ರಾಜಿನಾಮೆ ಪತ್ರ ಸಲ್ಲಿಸಿದ್ದು, ಮುಖ್ಯಮಂತ್ರಿಗಳು ರಾಜ್ಯಪಾಲರಾದ ನರೇಶ್ ಯಾದವ್ ಅವರಿಗೆ ಕಳುಹಿಸಿಕೊಟ್ಟಿದ್ದಾರೆ ಎಂದು ಮೂಲಗಳು ತಿಳಿಸಿವೆ.