ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಶಾಸಕ, ಸಂಸದರು ಜೈಲು ಶಿಕ್ಷೆಗೆ ಒಳಗಾದರೆ ಸದಸ್ಯತ್ವ ರದ್ದು: ಸುಪ್ರೀಂ

ಸಂಸದರು ಹಾಗೂ ಶಾಸಕರು ಯಾವುದೇ ಅಪರಾಧ ಪ್ರಕರಣದಲ್ಲಿ ಭಾಗಿಯಾಗಿ ಜೈಲು ಶಿಕ್ಷೆಗೆ..

Vishwanath S
Updated On : 10 Jul 2013, 4:16 am

ನವದೆಹಲಿ: ಸಂಸದರು ಹಾಗೂ ಶಾಸಕರು ಯಾವುದೇ ಅಪರಾಧ ಪ್ರಕರಣದಲ್ಲಿ ಭಾಗಿಯಾಗಿ ಜೈಲು ಶಿಕ್ಷೆಗೆ ಒಳಗಾದರೆ ಅಂತಹ ಸಂಸದರ ಹಾಗೂ ಶಾಸಕರ ಸದಸ್ಯತ್ವ ರದ್ದುಗೊಳಿಸುವುದಾಗಿ ಬುಧವಾರ ಸುಪ್ರೀಂಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಸುಪ್ರೀಂ ಕೋರ್ಟ್‌ನ ಈ ಆದೇಶ ಇಂದಿನಿಂದಲೇ ಜಾರಿಗೆ ಬರಲಿದೆ.

ಕಾನೂನು ಬಾಹಿರ ಚಟುವಟಿಕೆ ಹಾಗೂ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ 2 ವರ್ಷ ಹಾಗೂ ಅದಕ್ಕಿಂತ ಹೆಚ್ಚು ಜೈಲು ಶಿಕ್ಷೆಗೆ ಒಳಗಾಗುವ ಶಾಸಕರ ಹಾಗೂ ಸಂಸದರ ಸದಸ್ಯತ್ವ ಅನರ್ಹಗೊಳ್ಳಲಿದೆ ಎಂದು ಕೋರ್ಟ್ ತನ್ನ ಆದೇಶದಲ್ಲಿ ತಿಳಿಸಿದೆ.

ಯಾವುದೇ ವಿಚಾರಾಣಾಧಿನ ಕೋರ್ಟ್‌ನಲ್ಲಿ ಶಾಸಕ ಹಾಗೂ ಸಂಸದರ ವಿರುದ್ಧದ ಆರೋಪಗಳು ಸಾಬೀತಾದ ದಿನದಿಂದಲೇ ಅಭ್ಯರ್ಥಿಗಳ ಸದಸ್ಯತ್ವ ರದ್ದುಗೊಳ್ಳುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಆರೋಪ ಸಾಬೀತಾಗಿ ಜೈಲು ಶಿಕ್ಷೆ ಅನುಭವಿಸುತ್ತಿರುವ ನಾಯಕರು ಸಹ ಇನ್ನುಮುಂದೆ ಜೈಲಿನಿಂದಲೇ ಚುನಾವಣೆಗೆ ಸ್ಪರ್ಧಿಸುವಂತಿಲ್ಲ ಮತ್ತು ಈ ಆದೇಶ ಹಿಂದಿನ ಪ್ರಕರಣಗಳಿಗೆ ಅನ್ವಯಿಸುವುದಿಲ್ಲ. ಭವಿಷ್ಯದಲ್ಲಾಗುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗಲಿದೆ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement