ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಕಾಶ್ಮೀರ ಸಚಿವಾಲಯದಲ್ಲಿ ಭಾರಿ ಅಗ್ನಿ ಅವಘಡ

ಜಮ್ಮು ಮತ್ತು ಕಾಶ್ಮೀರ ಸಚಿವಾಲಯದಲ್ಲಿ ಗುರುವಾರ ಬೆಳಗ್ಗೆ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ..

Lingaraj Badiger
Updated On : 11 Jul 2013, 12:11 pm

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಸಚಿವಾಲಯದಲ್ಲಿ ಗುರುವಾರ ಬೆಳಗ್ಗೆ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ಘಟನೆಯಲ್ಲಿ ಯಾವುದೇ ಜೀವಹಾನಿಯಾದ ಬಗ್ಗೆ ವರದಿಯಾಗಿಲ್ಲ.

ಪ್ರತ್ಯಕ್ಷದರ್ಶಿಗಳ ಪ್ರಕಾರ, ಇಂದು ಬೆಳಗ್ಗೆ 9.30ರ ಸುಮಾರಿಗೆ ಸಚಿವಾಲಯದ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ನಂತರ ಅದು ಸರ್ಕಾರಿ ದಾಖಲೆಗಳ ಸಂಗ್ರಹ ಕೊಣೆಗೂ ವಿಸ್ತರಿಸಿದ್ದರಿಂದ ಹಲವು ಪ್ರಮುಖ ಕಡತಗಳು ಬೆಂಕಿಗಾಹುತಿಯಾಗಿವೆ. ಈ ವೇಳೆ ಸಚಿವಾಲಯದ ಯಾವುದೇ ಸಿಬ್ಬಂದಿ ಕಚೇರಿಯಲ್ಲಿ ಇರಲಿಲ್ಲ ಎನ್ನಲಾಗಿದೆ.

ತಕ್ಷಣವೇ ಘಟನಾ ಸ್ಥಳಕ್ಕೆ 12 ಅಗ್ನಿ ಶಾಮಕ ವಾಹನಗಳು ಧಾವಿಸಿದ್ದು, ಬೆಂಕಿಯನ್ನು ನಿಯಂತ್ರಿಸುವಲ್ಲಿ ಯಶಸ್ವಿಯಾಗಿವೆ. ಆದರೆ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡಿರುವುದಕ್ಕೆ ಏನು ಕಾರಣ ಎಂಬುದು ಮಾತ್ರ ಇನ್ನು ತಿಳಿದು ಬಂದಿಲ್ಲ. ಘಟನೆಯ ಕುರಿತು ರಾಜ್ಯ ಸರ್ಕಾರ ತನಿಖೆಗೆ ಆದೇಶಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement