ಕೇದಾರನಾಥ: ರಸ್ತೆಗಳ ಪುನರ್ ನಿರ್ಮಾಣ ಕಾರ್ಯ ಆರಂಭ
ಡೆಹ್ರಾಡೂನ್: ಭೀಕರ ಪ್ರವಾಹಕ್ಕೆ ತುತ್ತಾಗಿದ್ದ ಧಾರ್ಮಿಕ ಕ್ಷೇತ್ರ ಕೇದರಾನಾಥದ ಪ್ರಮುಖ ರಸ್ತೆಗಳ ಪುನರ್ ನಿರ್ಮಾಣ ಕಾರ್ಯವನ್ನು ಭಾರತೀಯ ಸೇನೆ ಗುರುವಾರ ಪ್ರಾರಂಭಿಸಿದೆ.
ಪ್ರವಾಹದಿಂದಾಗಿ ಹಾನಿಗೊಳಗಾಗಿರುವ ರಸ್ತೆಗಳ ಪುನರ್ ನಿರ್ಮಾಣ ಕಾರ್ಯ ಪ್ರಾರಂಭಿಸುವಂತೆ ರಾಜ್ಯ ಸರ್ಕಾರ ಹಾಗೂ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ಕೋರಿತ್ತು, ಹೀಗಾಗಿ ಭಾರತೀಯ ಸೇನೆ ರಸ್ತೆಗಳ ದುರಸ್ಥಿ ಕಾರ್ಯಕ್ಕೆ ಮುಂದಾಗಿದೆ.
ಕೇದಾರನಾಥದಲ್ಲಿ ಎಡೆಬಿಡದೆ ಸುರಿದ ಮಳೆಯಿಂದಾಗಿ ರಸ್ತೆಗಳು ಹಾನಿಗೊಳಗಾಗಿದ್ದು, ಇದರಿಂದ ರಕ್ಷಣಾಕಾರ್ಯಕ್ಕೆ ಅಡಿಯುಂಟಾಗಿತ್ತು. ಹೀಗಾಗಿ ಪರಿಹಾರ ಕಾರ್ಯಕ್ಕೆ ಬಳಸಲಾಗುತ್ತಿರುವ ಹೆಲಿಕಾಪ್ಟರ್ಗಳ ಹಾರಾಟಕ್ಕೆ ಕಷ್ಟವಾಗಿರುವುದರಿಂದ ಪ್ರವಾಹದಲ್ಲಿ ನಾಪತ್ತೆಯಾಗಿ ಬೆಟ್ಟಗುಡ್ಡಗಳಲ್ಲಿ ಸಿಲುಕಿರುವ ಪ್ರವಾಸಿಗರ ರಕ್ಷಣಾಕಾರ್ಯಕ್ಕೆ ಅಡ್ಡಿಯುಂಟಾಗುತ್ತಿದೆ. ಸಾಧ್ಯವಾದಷ್ಟು ಬೇಗ ರಸ್ತೆ ದುರಸ್ಥಿ ಕಾರ್ಯ ಪೂರ್ಣಗೊಂಡರೆ ರಕ್ಷಣಾ ಕಾರ್ಯ ಸುಲಭವಾಗುತ್ತದೆ ಎಂದು ಎನ್ಡಿಆರ್ಎಫ್ ಹೇಳಿದೆ.
ಪ್ರವಾಹದಿಂದಾಗಿ ಕೇದಾರನಾಥ ಸುತ್ತಮುತ್ತಲಿನ ಪ್ರದೇಶಗಳು ಹೆಚ್ಚು ಹಾನಿಗೆ ಒಳಗಾಗಿದೆ. ಅಲ್ಲದೆ ಪ್ರವಾಹದಿಂದಾಗಿ ನೂರಾರು ಮಂದಿ ಮೃತಪಟ್ಟಿದ್ದರು.