ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಉತ್ತರಾಖಂಡ: ಭೂಕುಸಿತಕ್ಕೆ 6 ಸಾವು

Vishwanath S
Updated On : 12 Jul 2013, 12:40 pm

ಡೆಹ್ರಾಡೂನ್: ಉತ್ತರಾಖಂಡನಲ್ಲಿ ಗುರುವಾರ ಸುರಿದ ಧಾರಾಕಾರ ಮಳೆಯಿಂದಾಗಿ ಭೂಕುಸಿತ ಸಂಭವಿಸಿದ ಪರಿಣಾಮ ಒಂದೇ ಕುಟುಂಬದ ಐವರು ಮೃತಪಟ್ಟಿದ್ದಾರೆ.

ಉತ್ತರಾಖಂಡನ ಬಿಮಲ್ ಪ್ರದೇಶದಲ್ಲಿ ಎಡಬಿಡದೆ ಮಳೆ ಸುರಿಯುತ್ತಿದೆ. ಇದರಿಂದ ಸಂಭವಿಸಿದ ಭೂಕುಸಿತದಲ್ಲಿ ಒಂದೇ ಕುಟುಂಬದ ಐವರು ಸೇರಿ ಒಟ್ಟು ಆರು ಮಂದಿ ಸಾವನ್ನಪ್ಪಿರುವುದಾಗಿ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕೇದರಾನಾಥ ಹಾಗೂ ಬದ್ರಿನಾಥಗಳಲ್ಲಿ ಎಡಬಿಡದೆ ಮಳೆ ಸುರಿಯುತ್ತಿರುವುದರಿಂದ ಕೆಲವು ಕಡೆ ಭೂಕುಸಿತ ಸಂಭವಿಸುತ್ತಿದೆ. ಅಲ್ಲದೆ ಪ್ರತಿಕೂಲ ವಾತಾವರಣದಿಂದಾಗಿ ಬೆಟ್ಟಗುಡ್ಡಗಳಲ್ಲಿ ಸಿಲುಕಿರುವ ಪ್ರವಾಸಿಗರ ರಕ್ಷಣೆಗೂ ಸಹ ಅಡ್ಡಿ ಉಂಟಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಕಳೆದ ಎರಡು ದಿನಗಳ ಹಿಂದೆಯಷ್ಟೇ ರಸ್ತೆ ದುರಸ್ಥಿ ಕಾರ್ಯ ನಡೆಯುತ್ತಿದ್ದ ಸಂದರ್ಭದಲ್ಲಿ ಜೆಸಿಬಿ ಕಾಲುವೆಗೆ ಮುಗುಚಿ ಬಿದ್ದ ಪರಿಣಾಮ 7 ಜನ ಮೃತಪಟ್ಟಿದ್ದರು. ಉತ್ತರಾಖಂಡದಲ್ಲಿ ಸಂಭವಿಸಿದ್ದ ಜಲಪ್ರಳಯಕ್ಕೆ ನೂರಾರು ಮಂದಿ ಮೃತಪಟ್ಟಿದ್ದು, ಇನ್ನೂ ಸಾವಿರಾರು ಮಂದಿ ನಾಪತ್ತೆಯಾಗಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement