ನಿರಾಶಾದಾಯಕ ಬಜೆಟ್: ಕುಮಾರಸ್ವಾಮಿ
ಬೆಂಗಳೂರು: ರಾಜ್ಯದ ಜನತೆ ಕಾಂಗ್ರೆಸ್ ಸರ್ಕಾರದ ಮೇಲೆ ಇಟ್ಟುಕೊಂಡಿದ್ದ ಭರವಸೆಯನ್ನು ಸಿದ್ದರಾಮಯ್ಯ ಹುಸಿಗೊಳಿಸಿದ್ದಾರೆ. ಒಟ್ಟಾರೆ ನಿರಾಶಾದಾಯಕ ಹಾಗೂ ರಾಜ್ಯದ ಅಭಿವೃದ್ದಿ ಪರ ದೂರದೃಷ್ಟಿ ಇಲ್ಲದ ಬಜೆಟ್ ಇದಾಗಿದೆ ಎಂದು ಪ್ರತಿಪಕ್ಷದ ನಾಯಕ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಸಿದ್ದರಾಮಯ್ಯ ಅವರು ಬಜೆಟ್ ಮಂಡನೆ ಮಾಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ ಅವರು, ಉತ್ತಮ ಬಜೆಟ್ ರೂಪಿಸುವಲ್ಲಿ ಸಿದ್ದರಾಮಯ್ಯ ಅವರು ಸೋತಿದ್ದಾರೆ ಮತ್ತು ರಾಜ್ಯದ ಅಭಿವೃದ್ದಿಗೆ ಪೂರಕವಲ್ಲದ ಬಜೆಟ್ ಮಂಡಿಸಿದ್ದಾರೆ ಎಂದಿದ್ದಾರೆ.
ರೈತಪರ ಕಾಳಜಿ ಹೊಂದಿರುವ ಸಿದ್ದರಾಮಯ್ಯ ಅವರು, ರೈತರಿಗೆ ಪ್ರಯೋಜನವಾಗುವಂತ ಆಯವ್ಯಯ ಮಂಡಿಸುವಲ್ಲಿ ವಿಫಲವಾಗಿದ್ದಾರೆ ಎಂದು ಎಚ್ಡಿಕೆ ತಿಳಿಸಿದ್ದಾರೆ.
ರಾಜ್ಯದ ಅಭಿವೃದ್ದಿಗೆ ಪೂರಕವಾದ ಬಜೆಟ್ ಇದಾಗಿಲ್ಲ ಎಂದು ಕುಮಾರಸ್ವಾಮಿ ಅಭಿಪ್ರಾಯ ಪಟ್ಟಿದ್ದಾರೆ. ಅಲ್ಲದೆ ಬಜೆಟ್ ಮಂಡನೆ ವೇಳೆ ಸಿದ್ದರಾಮಯ್ಯ ಅವರು ಹಿಂದಿನ ಸರ್ಕಾರಗಳ ಬಜೆಟ್ ಮಂಡನೆ ಸಂಬಂಧ ಲೋಪದೋಷಗಳ ಬಗ್ಗೆ ದೂಷಿಸಿರುವುದೇ ಅವರ ದೊಡ್ಡ ಸಾಧನೆ ಎಂದು ವ್ಯಂಗ್ಯವಾಡಿದ್ದಾರೆ.