ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಸಿದ್ದು ಬಜೆಟ್‌ಗೆ ನಾಯಕರ ಪ್ರತಿಕ್ರಿಯೆ

Lingaraj Badiger
Updated On : 12 Jul 2013, 3:53 am

ಬೆಂಗಳೂರು: ತಾವು ಮಂಡಿಸಿದ್ದ ಪ್ರತ್ಯೇಕ ಕೃಷಿ ಬಜೆಟ್‌ನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೈಬಿಟ್ಟಿದ್ದಕ್ಕೆ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಲೋಕಸಭೆ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಸಿದ್ದರಾಮಯ್ಯ ಬಜೆಟ್ ಮಂಡಿಸಿದ್ದಾರೆ. ಅದರಲ್ಲಿ ಯಾವುದೇ ವಿಶೇಷ ಇಲ್ಲ ಎಂದಿದ್ದಾರೆ. ಅಲ್ಲದೆ ಪ್ರತ್ಯೇಕ ಕೃಷಿ ಬಜೆಟ್ ಮಂಡಿಸದಿರುವುದನ್ನು ಖಂಡಿಸಿದ್ದಾರೆ.

ದೂರದೃಷ್ಟಿ ಇಲ್ಲದ ಬಜೆಟ್
ಸಿದ್ದು ಬಜೆಟ್ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನಪರಿಷತ್ ಪ್ರತಿಪಕ್ಷದ ನಾಯಕ ಡಿ.ವಿ.ಸದಾನಂದಗೌಡ ಅವರು, ಇದೊಂದು ದೂರದೃಷ್ಟಿ ಇಲ್ಲದ ಬಜೆಟ್ ಮತ್ತು ಬಿಜೆಪಿ ಸರ್ಕಾರದ ಬಜೆಟ್‌ನ್ನೆ ಸಿದ್ದರಾಮಯ್ಯ ಅವರು ಕಾಪಿ ಮಾಡಿದ್ದಾರೆ ಎಂದಿದ್ದಾರೆ.

ಬಜೆಟ್ ಬಗ್ಗೆ ನಾವು ಬಹಳಷ್ಟು ನಿರೀಕ್ಷೆಗಳನ್ನಿಟ್ಟುಕೊಂಡಿದ್ದೇವು. ಆದರೆ ಸಿಎಂ ಆ ಎಲ್ಲ ನಿರೀಕ್ಷೆಗಳನ್ನು ಹುಸಿ ಮಾಡಿದ್ದಾರೆ. ಬಜೆಟ್‌ನಲ್ಲಿ ಅಂಕಿ ಅಂಶಗಳ ಸಹಿತ ಯಾವುದೇ ಹೊಸ ಯೋಜನೆಗಳ ಬಗ್ಗೆ ಹೇಳಿಲ್ಲ ಎಂದು ಸದಾನಂದಗೌಡ ಅವರು ತಿಳಿಸಿದ್ದಾರೆ.

ಕಡಿಮೆ ಗಾತ್ರದ ಬಜೆಟ್
ಇದು ಬಿಜೆಪಿ ಸರ್ಕಾರಕ್ಕಿಂತ ಕಡಿಮೆ ಗಾತ್ರದ ಬಜೆಟ್ ಎಂದು ಮಾಜಿ ಸಚಿವ ಸಿ.ಟಿ.ರವಿ ಅವರು ಹೇಳಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement