ವೀರಪ್ಪ ಮೊಯ್ಲಿ ಕಾರು ಅಪಘಾತ, ಅಪಾಯದಿಂದ ಪಾರು
ಕೇಂದ್ರ ಪೆಟ್ರೋಲಿಯಂ ಸಚಿವ ಎಂ. ವೀರಪ್ಪ ಮೊಯ್ಲಿ ಅವರು ಪ್ರಯಾಣಿಸುತ್ತಿದ್ದ ಕಾರು ಶನಿವಾರ ಅಪಘಾತಕ್ಕಿಡಾಗಿದ್ದು,...
ಬೆಂಗಳೂರು: ಕೇಂದ್ರ ಪೆಟ್ರೋಲಿಯಂ ಸಚಿವ ಎಂ. ವೀರಪ್ಪ ಮೊಯ್ಲಿ ಅವರು ಪ್ರಯಾಣಿಸುತ್ತಿದ್ದ ಕಾರು ಶನಿವಾರ ಅಪಘಾತಕ್ಕಿಡಾಗಿದ್ದು, ಮೊಯ್ಲಿ ಅವರು ಅಪಾಯದಿಂದ ಪಾರಾಗಿದ್ದಾರೆ.
ವೀರಪ್ಪ ಮೊಯ್ಲಿ ಅವರು ತುಮಕೂರಿನಿಂದ ಬೆಂಗಳೂರಿಗೆ ಬರುತ್ತಿದ್ದ ವೇಳೆ ನೆಲಮಂಗಲದ ಸಮೀಪದ ಕುಲುವನಹಳ್ಳಿ ಬಳಿ ಕೇಂದ್ರ ಸಚಿವರ ಕಾರು ಸೇರಿದಂತೆ ನಾಲ್ಕು ಕಾರುಗಳ ನಡುವೆ ಸರಣಿ ಅಪಘಾತ ಸಂಭವಿಸಿದೆ.
ಇಂದು ಮಧ್ಯಾಹ್ನ 3.45ರ ಸುಮಾರಿಗೆ ಈ ಘಟನೆ ಸಂಭವಿಸಿದ್ದು, ಎಮ್ಮೆಯೊಂದು ಅಡ್ಡ ಬಂದಿದ್ದೆ ಈ ಸರಣಿ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಇನ್ನು ಅಪಘಾತದ ಬಳಿಕ ಮೊಯ್ಲಿ ಅವರು ಬೆರೆ ಕಾರಿನ ಮೂಲಕ ಬೆಂಗಳೂರಿಗೆ ಪ್ರಯಾಣ ಬೆಳೆಸಿದರು ಎನ್ನಲಾಗಿದೆ.