ಆಸ್ತಿ ವಿವಾದ: ಮಾರಕಾಸ್ತ್ರಗಳಿಂದ ಕೊಚ್ಚಿ ಮೂವರ ಕೊಲೆ
ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಮೂವರನ್ನು ಕೊಲೆ ಮಾಡಿದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ..
ಶಿವಮೊಗ್ಗ: ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಮೂವರನ್ನು ಕೊಲೆ ಮಾಡಿದ ಘಟನೆ ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಭದ್ರಪುರದಲ್ಲಿ ಸೋಮವಾರ ನಡೆದಿದೆ.
ಭದ್ರಪುರದ ನಿವಾಸಿಗಳಾದ ಪ್ರಕಾಶ್, ಚಂದ್ರ ಹಾಗೂ ರಮೇಶ್ ಎಂಬುವವರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ ಎನ್ನಲಾಗಿದೆ.
ಸ್ಥಳಕ್ಕೆ ಹೊಳೆಹೊನ್ನೂರು ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.