ಎನ್ಡಿಎ ತೊರೆದ ಜೆಡಿಯು ನಿರ್ಧಾರ ಸರಿ: ನಿತೀಶ್
ಪಾಟ್ನಾ: ಎನ್ಡಿಎ ಮೈತ್ರಿಕೂಟದಿಂದ ಹೊರಬಂದಿರುವ ಜೆಡಿಯು ನಿರ್ಧಾರ ಸರಿಯಾಗಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಸೋಮವಾರ ಹೇಳಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಂದು ಸಮುದಾಯದ ಬಗ್ಗೆ ಅಷ್ಟು ಹಗುರವಾಗಿ ಮಾತನಾಡುವ ಅವಶ್ಯಕತೆ ಏನಿತ್ತು. ದೇಶದ ಜನರ ಭಾವನೆಗಳಿಗೆ ನೋವನ್ನುಂಟು ಮಾಡುವ ರೀತಿಯಲ್ಲಿ ಬಿಜೆಪಿ ನಡೆದುಕೊಳ್ಳುತ್ತಿದೆ. ಅಲ್ಲದೆ ಕೀಳು ಮಟ್ಟದ ಶಬ್ದಗಳನ್ನು ಬಳಸಿರುವುದು ನನ್ನ ಮನಸ್ಸಿಗೆ ನೋವನ್ನುಂಟು ಮಾಡಿದೆ ಎಂದರು.
ಇಂತಹ ಎನ್ಡಿಎ ಮೈತ್ರಿಕೂಟದಿಂದ ಜೆಡಿಯು ಹೊರ ಬಂದು ಒಳ್ಳೆ ಕೆಲಸ ಮಾಡಿದೆ. ಮುಂದಾದರು ಬಿಜೆಪಿ ತನ್ನ ಮಾತುಗಳಿಗೆ ಕಡಿವಾಣ ಹಾಕಿಕೊಳ್ಳಬೇಕು. ಇಲ್ಲವಾದರೆ ಜನರೆ ಇದಕ್ಕೆ ತಕ್ಕ ಉತ್ತರ ನೀಡಲ್ಲಿದ್ದಾರೆ ಎಂದರು.
ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರು ಸಂದರ್ಶನದ ಸಮಯದಲ್ಲಿ ಸಮುದಾಯಗಳ ಬಗ್ಗೆ ಬಳಸಿರುವ ಪದಗಳು ಮನಸ್ಸಿಗೆ ನೋವನ್ನುಂಟು ಮಾಡಿದೆ ಎಂದು ವಿಷಾದಿಸಿದ್ದಾರೆ.