ಸಿಎಜಿ ನೇಮಕಾತಿ ಪ್ರಶ್ನಿಸಿ ಸಲ್ಲಿಸಿದ್ದ ಪಿಐಎಲ್ ವಜಾ
ಸಿಎಜಿಯಾಗಿ ಶಶಿಕಾಂತ್ ಶರ್ಮಾ ಅವರ ನೇಮಕಾತಿ ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು...
ನವದೆಹಲಿ: ಸಿಎಜಿಯಾಗಿ ಶಶಿಕಾಂತ್ ಶರ್ಮಾ ಅವರ ನೇಮಕಾತಿ ಪ್ರಶ್ನಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸುಪ್ರೀಂಕೋರ್ಟ್ ಸೋಮವಾರ ವಜಾಗೊಳಿಸಿದೆ.
ಶರ್ಮಾ ಅವರನ್ನು ಸಿಎಜಿ ಹುದ್ದೆಗೆ ನೇಮಕಗೊಳಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿತ್ತು. ಈ ನೇಮಕಾತಿಯನ್ನು ಪ್ರಶ್ನಿಸಿ ಮಾಜಿ ಕೇಂದ್ರ ಚುನಾವಣಾ ಅಧಿಕಾರಿ ಎನ್. ಗೋಪಾಲಸ್ವಾಮಿ, ಮಾಜಿ ಎನ್ಎಸ್ಎ ಅಧಿಕಾರಿ ಆರ್.ಎಚ್. ತಹಿಲೈನಿ ಅವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ನ ಮುಖ್ಯ ನ್ಯಾಯಾಧಿಶರಾದ ಅಲ್ತಮಸ್ ಕಬೀರ್ ಅವರು ಅರ್ಜಿಯನ್ನು ವಜಾಗೊಳಿಸಿದ್ದಾರೆ. ಅಲ್ಲದೆ ಈ ಸಂಬಂಧ ಹೈಕೋರ್ಟ್ನಲ್ಲಿ ಪ್ರಕರಣ ದಾಖಲಿಸುವಂತೆ ಸೂಚಿಸಿದ್ದಾರೆ.
ಯಾವ ಆಧಾರದ ಮೇಲೆ ಶರ್ಮಾ ಅವರನ್ನು ಸಿಎಜಿ ಹುದ್ದೆಗೆ ಆಯ್ಕೆ ಮಾಡಲಾಗಿದೆ ಎಂದು ಪ್ರಶ್ನಿಸಿದ್ದ ಅರ್ಜಿದಾರರು, ಸಿಎಜಿ ನೇಮಕಾತಿ ವಿಷಯದಲ್ಲಿ ಕೇಂದ್ರ ಸರ್ಕಾರ ಅನುಸರಿಸುತ್ತಿರುವ ಕ್ರಮ ಸರಿಯಿಲ್ಲ. ನೇಮಕಾತಿಗೆ ಸಂಬಂಧಿಸಿದಂತೆ ಯಾವುದೇ ಆಯ್ಕೆ ಸಮಿತಿ ರಚಿಸಿಲ್ಲ. ಹಾಗೂ ನೇಮಕಾತಿ ಪಾರದರ್ಶಕವಾಗಿಲ್ಲ ನಡೆದಿಲ್ಲ ಎಂದು ಅರ್ಜಿಯಲ್ಲಿ ದೂರಿದ್ದರು.