ಪ್ರಚಾರದ ವೇಳೆ ಕೇಂದ್ರ ಸಚಿವ ಖಾನ್ ಮೇಲೆ ಬಾಂಬ್ ದಾಳಿ
ಪಶ್ಚಿಮ ಬಂಗಾಳದಲ್ಲಿ ಪ್ರಚಾರದಲ್ಲಿ ತೊಡಗಿದ್ದ ಕೇಂದ್ರ ಆರೋಗ್ಯ, ಕುಟುಂಬ ಕಲ್ಯಾಣ ಖಾತೆ ರಾಜ್ಯ ಸಚಿವ ಎ.ಎಚ್. ಖಾನ್ ಚೌಧರಿ...
ಕೊಲ್ಕತ್ತಾ: ಪಶ್ಚಿಮ ಬಂಗಾಳದಲ್ಲಿ ಪ್ರಚಾರದಲ್ಲಿ ತೊಡಗಿದ್ದ ಕೇಂದ್ರ ಆರೋಗ್ಯ, ಕುಟುಂಬ ಕಲ್ಯಾಣ ಖಾತೆ ರಾಜ್ಯ ಸಚಿವ ಎ.ಎಚ್. ಖಾನ್ ಚೌಧರಿ ಅವರ ಕಾರ್ ಮೇಲೆ ಮಂಗಳವಾರ ದುಷ್ಕರ್ಮಿಗಳು ನಾಡ ಬಾಂಬ್ ದಾಳಿ ನಡೆಸಿದ್ದಾರೆ.
ಪಶ್ಚಿಮ ಬಂಗಾಳದ ಸ್ಥಳೀಯ ಸಂಸ್ಥೆ ಚುನಾವಣೆಯ ಪ್ರಚಾರ ಕಾರ್ಯದಲ್ಲಿ ತೊಡಗಿದ್ದ ಸಂದರ್ಭದಲ್ಲಿ, ಕೆಲ ದುಷ್ಕರ್ಮಿಗಳು ಖಾನ್ ಚೌಧರಿ ಅವರ ಪ್ರಯಾಣಿಸುತ್ತಿದ್ದ ಕಾರಿನ ಮೇಲೆ ನಾಡ ಬಾಂಬ್ಗಳನ್ನು ಎಸೆದಿದ್ದಾರೆ. ಅದೃಷ್ಟವಶಾತ ದಾಳಿಯಲ್ಲಿ ಖಾನ್ ಅವರು ಸುರಕ್ಷಿತವಾಗಿ ಪಾರಾಗಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಇಂದು ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿದ್ದ ಖಾನ್ ಮೇಲೆ ಏಕಾಏಕಿ ದಾಳಿ ಮಾಡಿರುವ ದುಷ್ಕರ್ಮಿಗಳು 5 ನಾಡ ಬಾಂಬ್ಗಳನ್ನು ಖಾನ್ ಕಾರಿನ ಕಡೆ ಎಸೆದಿದ್ದಾರೆ. ಈ ಮಧ್ಯೆ ತೃಣಮೂಲ ಕಾಂಗ್ರೆಸ್(ಟಿಎಂಸಿ)ನ ಕಾರ್ಯಕರ್ತರು ಈ ದಾಳಿ ಮಾಡಿರುವ ಸಾಧ್ಯತೆ ಇದೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.