ವಿಧಾನಸಭೆಯಲ್ಲಿ ಬಿಜೆಪಿ ಪರ ಬಿಎಸ್ವೈ ಬ್ಯಾಟಿಂಗ್
ಮಾಜಿ ಮುಖ್ಯಮಂತ್ರಿ ಹಾಗೂ ಕೆಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಮಂಗಳವಾರ ವಿಧಾನಸಭೆಯಲ್ಲಿ ಬಿಜೆಪಿ...
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಹಾಗೂ ಕೆಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಮಂಗಳವಾರ ವಿಧಾನಸಭೆಯಲ್ಲಿ ಬಿಜೆಪಿ ಪರ ಬ್ಯಾಟ್ ಮಾಡುವ ಮೂಲಕ ಮತ್ತೆ ತವರು ಪಕ್ಷಕ್ಕೆ ಮರಳುವ ಆಸಕ್ತಿ ತೋರಿದ್ದಾರೆ.
ಇಂದು ವಿಧಾನಸಭೆಯಲ್ಲಿ ಮಾತನಾಡಿದ ಬಿಎಸ್ವೈ, ಬಿಜೆಪಿ ಒಳ ಜಗಳದಿಂದ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ನಮ್ಮಿಂದ ತಪ್ಪಾಗಿದೆ ನಿಜ. ಇದೀಗ ನಮಗೆ ಬುದ್ಧಿ ಬಂದಿದ್ದು, ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ನ್ನು 7ರಿಂದ 8 ಸ್ಥಾನಕ್ಕೆ ಇಳಿಸ್ತೀವಿ ಎಂದು ಹೇಳಿವ ಮೂಲಕ ಬಿಜೆಪಿ ಸೋಲನ್ನು ಪರೋಕ್ಷವಾಗಿ ಸಮರ್ಥಸಿಕೊಂಡಿದ್ದಾರೆ. ಅಲ್ಲದೆ ಮತ್ತೆ ಬಿಜೆಪಿಯೊಂದಿಗೆ ಕೈಜೋಡಿಸುವ ಸೂಚನೆ ನೀಡಿದ್ದಾರೆ.
ಯಡಿಯೂರಪ್ಪ ಅವರು ಮುಂದಿನ ಲೋಕಸಭಾ ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಕೆಜೆಪಿಯನ್ನು ಬಿಜೆಪಿಯೊಂದಿಗೆ ವಿಲೀನಗೊಳಿಸುವುದು, ಇಲ್ಲವೇ ಆ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವ ಚಿಂತನೆ ನಡೆಸಿದ್ದಾರೆ. ಅಲ್ಲದೆ ಬಿಜೆಪಿ ತೊರೆದು ಬಿಎಸ್ಆರ್ ಕಾಂಗ್ರೆಸ್ ಸ್ಥಾಪಿಸಿದ್ದ ಮಾಜಿ ಸಚಿವ ಬಿ.ಶ್ರೀರಾಮುಲು ಸಹ ಬಿಜೆಪಿ ಸೇರ್ಪಡೆಗೆ ಸದ್ದಿಲ್ಲದೇ ಸಿದ್ದತೆ ನಡೆಸಿದ್ದಾರೆ.