ಮೋದಿ ಸಮರ್ಥಿಸಿಕೊಂಡಿದ್ದ ಬಹದೂರ್ ಬಿಎಸ್ಪಿಯಿಂದ ಉಚ್ಚಾಟನೆ
ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರ 'ನಾಯಿ ಮರಿ' ವಿವಾದಾತ್ಮಕ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದ ಬಿಎಸ್ಪಿ..
ಲಖನೌ: ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರ 'ನಾಯಿ ಮರಿ' ವಿವಾದಾತ್ಮಕ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದ ಬಿಎಸ್ಪಿ ಸಂಸದ ವಿಜಯ್ ಬಹದೂರ್ ಸಿಂಗ್ ಅವರನ್ನು ಬುಧವಾರ ಪಕ್ಷದಿಂದ ಉಚ್ಚಾಟಿಸಲಾಗಿದೆ.
ಸಂಸದ ಬಹದೂರ್ ಸಿಂಗ್ ಅವರು ಪದೇಪದೆ ಪಕ್ಷದ ಶಿಸ್ತನ್ನು ಉಲ್ಲಂಘಿಸಿ ಪಕ್ಷಕ್ಕೆ ಮುಜುಗರ ಉಂಟುಮಾಡುವಂತಹ ಹೇಳಿಕೆಗೆಳನ್ನು ನೀಡುತ್ತಿದ್ದಾರೆ. ಹೀಗಾಗಿ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ವಿಜಯ್ ಬಹದೂರ್ ಸಿಂಗ್ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿರುವ ಬಗ್ಗೆ ಲೋಕಸಭಾ ಸ್ಪೀಕರ್ ಮೀರಾ ಕುಮಾರ್ ಅವರು ತಮಗೆ ಮಾಹಿತಿ ನೀಡಿದ್ದಾರೆ ಎಂದು ಬಿಎಸ್ಪಿಯ ಹಿರಿಯ ನಾಯಕರೊಬ್ಬರು ಮಾಧ್ಯಮಕ್ಕೆ ತಿಳಿಸಿದ್ದಾರೆ.
ಬಿಎಸ್ಪಿಯಿಂದ ಮೊದಲ ಬಾರಿಗೆ ಸಂಸದರಾಗಿ ಆಯ್ಕೆಯಾಗಿದ್ದ ಸಿಂಗ್ ಅವರಿಗೆ ಈ ಬಾರಿ ಲೋಕಸಭೆ ಚುನಾವಣೆಗೆ ಟಿಕೆಟ್ ನೀಡಲು ಪಕ್ಷ ನಿರಾಕರಿಸಿದೆ.