ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಆದಿ ಮಠದ ಮೇಲೆ ಐಟಿ ದಾಳಿ: ಪರಿಷತ್‌ನಲ್ಲಿ ಪಕ್ಷಾತೀತ ವಿರೋಧ

ಆದಿಚುಂಚನಗಿರಿ ಮಠದ ಬಿಜಿಎಸ್ ವೈದ್ಯಕೀಯ ಸಂಸ್ಥೆ ಸೇರಿದಂತೆ ರಾಜ್ಯದ ಹಲವು ಶಿಕ್ಷಣ ಸಂಸ್ಥೆಗಳ ಮೇಲೆ ..

Lingaraj Badiger
Updated On : 19 Jul 2013, 3:12 am

ಬೆಂಗಳೂರು: ಆದಿಚುಂಚನಗಿರಿ ಮಠದ ಬಿಜಿಎಸ್ ವೈದ್ಯಕೀಯ ಸಂಸ್ಥೆ ಸೇರಿದಂತೆ ರಾಜ್ಯದ ಹಲವು ಶಿಕ್ಷಣ ಸಂಸ್ಥೆಗಳ ಮೇಲೆ ನಡೆದ ದಾಳಿಯನ್ನು ಶುಕ್ರವಾರ ವಿಧಾನ ಪರಿಷತ್‌ನಲ್ಲಿ ಎಲ್ಲ ರಾಜಕೀಯ ಪಕ್ಷಗಳ ನಾಯಕರು ಪಕ್ಷಾತೀತವಾಗಿ ವಿರೋಧಿಸಿದ್ದಾರೆ.

ವಿಷಯ ಪ್ರಸ್ತಾಪಿಸಿದ ವಿಧಾನ ಪರಿಷತ್ ಪ್ರತಿಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಡಿ.ವಿ ಸದಾನಂದಗೌಡ ಅವರು, ಮಠಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿರುವುದು ಖಂಡನಿಯ. ಈ ದಾಳಿಯಿಂದ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ ಎಂದರು.

ಇದಕ್ಕೆ ಧ್ವನಿಗೂಡಿಸಿದ ಇತರೆ ಪಕ್ಷಗಳ ಸದಸ್ಯರೂ ದಾಳಿಯನ್ನು ತೀವ್ರವಾಗಿ ಖಂಡಿಸಿದರು.

ಇನ್ನು ದಾಳಿಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಜಯನಗರದಲ್ಲಿರುವ ಆದಿ ಚುಂಚನಗಿರಿ ಮಠಕ್ಕೆ ಭೇಟಿ ನೀಡಿ, ನಿರ್ಮಲಾನಂದ ಸ್ವಾಮಿಜಿ ಅವರೊಂದಿಗೆ ಚರ್ಚಿಸಿದ್ದಾರೆ.

ಆದಿಚುಂಚನಗಿರಿ ಮಠ ಈ ವರ್ಷದಿಂದ ಆರಂಭಿಸಿರುವ ಬಿಜಿಎಸ್ ವೈದ್ಯ ಕಾಲೇಜು, ಬೆಂಗಳೂರಿನ ಅಂಬೇಡ್ಕರ್ ಮೆಡಿಕಲ್ ಕಾಲೇಜು, ಹಾಗೂ ಬನ್ನೇರುಘಟ್ಟ ರಸ್ತೆಯಲ್ಲಿರುವ ಸಪ್ತಗಿರಿ ಶಿಕ್ಷಣ ಸಂಸ್ಥೆ ಹಾಗೂ ಗುಲ್ಬರ್ಗದಲ್ಲಿ ಶಶೀಲ್ ನಮೋಶಿ ಅವರ ಮನೆ ಸೇರಿದಂತೆ 14ಕ್ಕೂ ಹೆಚ್ಚು ಕಡೆ ನಿನ್ನೆ ಏಕಕಾಲಕ್ಕೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement