ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಉ.ಪ್ರದೇಶ: ಮಾಜಿ ಶಾಸಕ ಸೇರಿ ಇಬ್ಬರ ಬರ್ಬರ ಹತ್ಯೆ

ಉತ್ತರ ಪ್ರದೇಶದ ಮಾಜಿ ಶಾಸಕರೊಬ್ಬರು ಸೇರಿದಂತೆ ಇಬ್ಬರನ್ನು ಶುಕ್ರವಾರ ಅಪರಿಚಿತ ಬಂದೂಕುಧಾರಿಗಳು...

Vishwanath S
Updated On : 19 Jul 2013, 3:01 am

ಅಝಮ್‌ಗರ್: ಉತ್ತರ ಪ್ರದೇಶದ ಮಾಜಿ ಶಾಸಕರೊಬ್ಬರು ಸೇರಿದಂತೆ ಇಬ್ಬರನ್ನು ಶುಕ್ರವಾರ ಅಪರಿಚಿತ ಬಂದೂಕುಧಾರಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.

ಅಝಮ್‌ಗರ್‌ನ ಜಿಯಾನ್‌ಪುರದ ಶಿಕು ಎಂಬಲ್ಲಿ ಈ ಘಟನೆ ನಡೆದಿದ್ದು, ಬಿಎಸ್ಪಿಯ ಮಾಜಿ ಶಾಸಕ ಸರ್ವೇಶ್ ಸಿಂಗ್ ಸಿಪ್ಪು ಅವರ ಮೇಲೆ ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ. ಈ ವೇಳೆ ಸರ್ವೇಶ್ ಅವರೊಂದಿಗಿದ್ದ ವ್ಯಕ್ತಿ ಸಹ ಗುಂಡೇಟಿಗೆ ಬಲಿಯಾಗಿದ್ದಾರೆ. ಪ್ರಕರಣವೊಂದರ ಸಂಬಂಧ ಇಂದು ಸ್ಥಳೀಯ ಪೊಲೀಸ್ ಠಾಣೆಗೆ ತೆರಳಿದ್ದ ಶಾಸಕರು, ಠಾಣೆಯಿಂದ ಹೊರಬರುತ್ತಿದ್ದಾಗ ದುಷ್ಕರ್ಮಿಗಳು ಗುಂಡಿಕ್ಕಿ ಕೊಲೆ ಮಾಡಿದ್ದಾರೆ.

ಹತ್ಯೆಯಿಂದ ಉದ್ರಿಕ್ತರಾದ ಸ್ಥಳೀಯರು ಪೊಲೀಸ್ ಠಾಣೆಗೆ ಕಲ್ಲೆಸೆದು ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೆ ದುಷ್ಕರ್ಮಿಗಳನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿದರು. ಘಟನಾ ಸ್ಥಳದಲ್ಲಿ ನೂರಾರು ಮಂದಿ ಜಮಾವಣೆಗೊಂಡಿದ್ದರಿಂದ ಪರಿಸ್ಥಿತಿಯನ್ನು ಹತೋಟಿಗೆ ತರಲು ಹೆಚ್ಚುವರಿ ಪೊಲೀಸರನ್ನು ಘಟನಾ ಸ್ಥಳಕ್ಕೆ ರವಾನಿಸಲಾಗಿದೆ.

ಎಸ್ಪಿ ಪಕ್ಷದಿಂದ ಅಮರ್ ಸಿಂಗ್ ಬೇರ್ಪಟ್ಟ ನಂತರ ಸಿಪ್ಪು ಅವರು ಬಿಎಸ್ಸಿ ಪಕ್ಷವನ್ನು ಸೇರಿದ್ದರು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಎಸ್ಸಿಯಿಂದ ಸ್ಪರ್ಧಿಸಿ, ಸೋಲು ಅನುಭವಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement