ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಲೋಕಸಭೆ ಚುನಾವಣೆಗೆ ಮೋದಿ ಟೀಂ ರೆಡಿ

ಬಿಜೆಪಿ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಹಾಗೂ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ನೇತೃತ್ವದ ಟೀಂ..

Lingaraj Badiger
Updated On : 19 Jul 2013, 1:34 am

ನವದೆಹಲಿ: ಬಿಜೆಪಿ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಹಾಗೂ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ನೇತೃತ್ವದ ಟೀಂ ಮುಂಬರುವ ಲೋಕಸಭಾ ಚುನಾವಣೆಗೆ ಸಿದ್ಧವಾಗಿದ್ದು, ಲೋಕ ಕದನಕ್ಕೆ ರಣತಂತ್ರ ರೂಪಿಸುತ್ತಿದೆ.

ಬಿಜೆಪಿ ಅಧ್ಯಕ್ಷ ರಾಜನಾಥ್ ಸಿಂಗ್, ಪ್ರತಿಪಕ್ಷದ ನಾಯಕಿ ಸುಷ್ಮಾ ಸ್ವರಾಜ್, ಬಿಜೆಪಿ ಪ್ರಧಾನ ಕಾರ್ಯದರ್ಶಿಗಳಾದ ಅನಂತ್‌ಕುಮಾರ್ ಹಾಗೂ ಅಮಿತ್ ಶಾ, ಧರ್ಮೇಂದ್ರ ಪ್ರಧಾನ್, ಅರುಣ್ ಜೇಟ್ಲಿ, ರಾಮ್‌ಲಾಲ್, ವೆಂಕಯ್ಯ ನಾಯ್ಡು ರಾಜೀವ್ ಪ್ರತಾಪ್ ರೂಡಿ, ರವಿಶಂಕರ್ ಪ್ರಸಾದ್, ವರುಣ್ ಗಾಂಧಿ, ಮುಖ್ತಾರ್ ಅಬ್ಬಾಸ್ ನಖ್ವಿ, ಸುಧಾಂಶು ತ್ರಿವೇದಿ ಅವರು ಮೋದಿ ನೇತೃತ್ವದ ನೂತನ ತಂಡದಲ್ಲಿದ್ದಾರೆ.

ಇನ್ನು ಪಕ್ಷದ ಹಿರಿಯ ನಾಯಕ ಮುರುಳಿ ಮನೋಹರ ಜೋಶಿ ಅವರಿಗೆ ಚುನಾವಣಾ ಪ್ರಣಾಳಿಕೆಯ ಜವಾಬ್ದಾರಿ ನೀಡುವ ಸಾಧ್ಯತೆ ಇದ್ದು, ಈ ಬಗ್ಗೆ ಇನ್ನು ಒಂದೇರಡು ದಿನದಲ್ಲಿ ಅಧಿಕೃತ ಪ್ರಕಟಣೆ ಹೊರ ಬೀಳಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಮೋದಿ ಟೀಂನಲ್ಲಿ ಬಿಜೆಪಿ ಹಿರಿಯ ನಾಯಕ ಎಲ್.ಕೆ.ಆಡ್ವಾಣಿ ಅವರ ಆಪ್ತ ಆನಂತ್ ಕುಮಾರ್ ಅವರಿಗೆ ಸ್ಥಾನ ನೀಡಿರುವುದರಿಂದ ಮಾಜಿ ಮುಖ್ಯಮಂತ್ರಿ ಹಾಗೂ ಕೆಜೆಪಿ ಅಧ್ಯಕ್ಷ ಯಡಿಯೂರಪ್ಪ ಅವರನ್ನು ಮತ್ತೆ ಪಕ್ಷಕ್ಕೆ ಕರೆತರುವ ಯತ್ನಕ್ಕೆ ಹಿನ್ನೆಡೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement