ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ದಿಗ್ವಿಜಯ್ ಸಿಂಗ್ ವಿರುದ್ಧ ದೂರು ದಾಖಲು

ಸಲಿಂಗ ಕಾಮದ ಆರೋಪದ ಮೇಲೆ ಮಧ್ಯಪ್ರದೇಶ ಬಿಜೆಪಿ ಮಾಜಿ ಸಚಿವ ರಾಘವ್‌ಜಿ ಬಂಧನವಾಗುತ್ತಿದ್ದಂತೆ ..

Lingaraj Badiger
Updated On : 20 Jul 2013, 4:20 am

ಭೋಪಾಲ್: ಸಲಿಂಗ ಕಾಮದ ಆರೋಪದ ಮೇಲೆ ಮಧ್ಯಪ್ರದೇಶ ಬಿಜೆಪಿ ಮಾಜಿ ಸಚಿವ ರಾಘವ್‌ಜಿ ಬಂಧನವಾಗುತ್ತಿದ್ದಂತೆ ವಿವಾದತ್ಮಕ ಟ್ವೀಟ್ ಮಾಡಿದ್ದ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಅವರ ವಿರುದ್ಧ ಸ್ಥಳೀಯ ವಕೀಲರೊಬ್ಬರು ದೂರು ದಾಖಲಿಸಿದ್ದಾರೆ.

ಆರ್‌ಎಸ್‌ಎಸ್ ಕಾರ್ಯಕರ್ತರು ಆಗಿವ ವಕೀಲ ಸಂಗೀತ್ ವರ್ಮಾ ಅವರು ದಿಗ್ವಿಜಯ್ ಸಿಂಗ್ ವಿರುದ್ಧ ಶಾಹಪುರ ಪೊಲೀಸ್ ಠಾಣೆಯಲ್ಲಿ ನಿನ್ನೆ ದೂರು ದಾಖಲಿಸಿದ್ದಾರೆ ಎಂದು ಶನಿವಾರ ಪೊಲೀಸರು ತಿಳಿಸಿದ್ದಾರೆ.

ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಅವರು ತಮ್ಮ ಟ್ವೀಟ್ ಮೂಲಕ ಹಿಂದುಗಳ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಮಾಡಿದ್ದಾರೆ ಎಂದು ಶರ್ಮಾ ತಮ್ಮ ದೂರಿನಲ್ಲಿ ಆರೋಪಿಸಿದ್ದಾರೆ.

ಸಲಿಂಗಕಾಮದ ಆರೋಪದ ಮೇಲೆ ಮಧ್ಯಪ್ರದೇಶ ಮಾಜಿ ಸಚಿವರನ್ನು ಬಂಧಿಸುತ್ತಿದ್ದಂತೆ ಟ್ವೀಟ್ ಮಾಡಿದ್ದ ದಿಗ್ವಿಜಯ್ ಸಿಂಗ್ ಅವರು, 'ರಾಮ ಮತ್ತು ರಾಘವ್‌ಜಿ' ಎಂದು ಪ್ರಸ್ತಾಪ ಮಾಡಿದ್ದರು. ನಂತರ ತಮ್ಮ ಟ್ವೀಟರ್ ಹೇಳಿಕೆಯನ್ನು ತಪ್ಪಾಗಿ ಅರ್ಥೈಯಿಸಲಾಗಿದೆ ಎಂದು ಕಾಂಗ್ರೆಸ್ ನಾಯಕ ಹೇಳಿಕೆ ನೀಡಿದ್ದರು.

ದಿಗ್ವಿಜಯ್ ಸಿಂಗ್ ಅವರ ವಿರುದ್ಧ ದೂರು ಬಂದಿದೆ. ಆದರೆ ಇನ್ನು ಅಧಿಕೃತವಾಗಿ ಎಫ್‌ಐಆರ್ ದಾಖಲಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement