ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಪ.ಬಂಗಾಳದಲ್ಲಿ ಕಾರ್ಯಕರ್ತರ ಮಾರಾಮಾರಿ: ಏಳು ಮಂದಿ ಸಾವು

ಪಶ್ಚಿಮ ಬಂಗಾಳದ ಪಂಚಾಯತ್ ಚುನಾವಣೆಯ ಪ್ರಚಾರದ ವೇಳೆ ಕಾಂಗ್ರೆಸ್ ಹಾಗೂ ಸಿಪಿಐ(ಎಂ) ಕಾರ್ಯಕರ್ತರ...

Vishwanath S
Updated On : 21 Jul 2013, 7:51 am

ಮುರ್ಶಿದಾಬಾದ್: ಪಶ್ಚಿಮ ಬಂಗಾಳದ ಪಂಚಾಯತ್ ಚುನಾವಣೆಯ ಪ್ರಚಾರದ ವೇಳೆ ಕಾಂಗ್ರೆಸ್ ಹಾಗೂ ಸಿಪಿಐ(ಎಂ) ಕಾರ್ಯಕರ್ತರ ನಡುವಿನ ಮಾರಾಮಾರಿಯಲ್ಲಿ ಏಳು ಮಂದಿ ಭಾನುವಾರ ಮೃತಪಟ್ಟಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ನಾಳೆ ನಾಲ್ಕನೇ ಹಂತದ ಪಂಚಾಯತ್ ಚುನಾವಣೆಯ ಮತದಾನ ನಡೆಯಲಿದ್ದು, ಮುರ್ಷಿದಾಬಾದ್ ನ ಭರತ್ಪುರದಲ್ಲಿ ಪ್ರಚಾರದಲ್ಲಿ ತೊಡಗಿಕೊಂಡಿದ್ದ ಕಾಂಗ್ರೆಸ್ ನ ಕಾರ್ಯಕರ್ತರ ಕಾರ್ಯಕ್ಕೆ ಅಡ್ಡಿ ಪಡಿಸಲು ಸಿಪಿಐ(ಎಂ) ಕಾರ್ಯಕರ್ತರು ಮುಂದಾಗಿದ್ದಾರೆ. ಈ ಸಂದರ್ಭದಲ್ಲಿ ಎರಡು ಪಕ್ಷಗಳ ಕಾರ್ಯಕರ್ತರ ನಡುವೆ ಮಾರಾಮಾರಿ ಸಂಭವಿಸಿದೆ. ಘಟನೆಯಲ್ಲಿ 7 ಮಂದಿ ಮೃತಪಟ್ಟಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಘರ್ಷಣೆಯಲ್ಲಿ ಕಾಂಗ್ರೆಸ್ನ 3 ಮಂದಿ ಕಾರ್ಯಕರ್ತರು, ಸಿಪಿಐ(ಎಂ) 3 ಮಂದಿ ಹಾಗೂ ಸಿಪಿಎಂನ ಓರ್ವ ಕಾರ್ಯಕರ್ತ ಮೃತಪಟ್ಟಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ಚುನಾವಣೆ ಕಾವು ಜೋರಾಗಿದ್ದು, ಪಂಚಾಯತ್ ಚುನಾವಣೆಯನ್ನು ಪ್ರತಿಷ್ಠೆಯಾಗಿ ಪರಿಗಣಿಸಿರುವ ರಾಜಕೀಯ ಪಕ್ಷಗಳು ತಮ್ಮ ಪಕ್ಷವನ್ನು ಗೆಲ್ಲಿಸುವ ಸಲುವಾಗಿ ಪ್ರಚಾರದಲ್ಲಿ ತೊಡಗಿಕೊಂಡಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement