ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಹಿಂದುತ್ವದಿಂದ ದೇಶವನ್ನು ಗಟ್ಟಿಗೊಳಿಸೋಣ: ಭಾಗವತ್

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತರು ಒಗ್ಗಟ್ಟಾಗಿ ಹಿಂದುತ್ವದಿಂದ ದೇಶವನ್ನು ಗಟ್ಟಿಗೊಳಿಸಬೇಕು ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ...

Mainashree
Updated On : 21 Jul 2013, 7:47 am

ಪಾಟ್ನಾ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ(ಆರ್‌ಎಸ್‌ಎಸ್) ಕಾರ್ಯಕರ್ತರು ಒಗ್ಗಟ್ಟಾಗಿ ಹಿಂದುತ್ವದಿಂದ ದೇಶವನ್ನು ಗಟ್ಟಿಗೊಳಿಸಬೇಕು ಎಂದು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಭಾನುವಾರ ಕರೆ ನೀಡಿದ್ದಾರೆ.

ಕಾರ್ಯಕರ್ತರ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು ಹಿಂದುತ್ವ ರಾಷ್ಟ್ರೀಯತೆಯನ್ನು ಪ್ರತಿನಿಧಿಸಲಿದೆ. ದೇಶದಲ್ಲಿ ಬದಲಾವಣೆ ತರುವ ಏಕೈಕ ಮಾರ್ಗ ಹಿಂದುತ್ವವಾಗಿದೆ. ಆದ್ದರಿಂದ ಹಿಂದುತ್ವ ಗಟ್ಟಿಗೊಳಿಸಲು ಕಾರ್ಯಕರ್ತರು ದುಡಿಯಬೇಕು ಎಂದು ಅವರು ಹೇಳಿದ್ದಾರೆ.

ಸಂಘದ ಧ್ಯೇಯಗಳ ಬಗ್ಗೆ ತಿಳಿಯದೇ ಅನೇಕ ಜನರು ಮನ ಬಂದಂತೆ ಮಾತನಾಡುತ್ತಾರೆ. ಸಮಾಜಕ್ಕೆ ಹಿಂದುತ್ವ ಎಂದರೇನು? ಎಂಬುದನ್ನು ಮನದಟ್ಟು ಮಾಡಿಕೊಡಬೇಕಾಗಿದೆ. ಇದನ್ನು ಧರ್ಮಕ್ಕೆ ಹೋಲಿಸಿ ತಪ್ಪು ಕಲ್ಪನೆ ಮಾಡಲಾಗುತ್ತಿದೆ. ಹಿಂದುತ್ವ ಎಂಬುದು ಹಿಂದುಸ್ಥಾನದ ತಿರುಳಾಗಿದೆ. ಆದ್ದರಿಂದ ಹಿಂದುತ್ವದಿಂದ ದೇಶವನ್ನು ಗಟ್ಟಿಗೊಳಿಸಬೇಕು ಎಂದು ಎಂದು ಭಾಗವತ್ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement