ರಚನಾತ್ಮಕವಾಗಿರಿ: ಕಾಂಗ್ರೆಸ್ ನಾಯಕರಿಗೆ ರಾಹುಲ್ ಸಲಹೆ
2014ರ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಗೆಲುವಿಗಾಗಿ ಕಾಂಗ್ರೆಸ್ ನಾಯಕರಿಗೆ ರಚನಾತ್ಮಕವಾಗಿ ಕಾರ್ಯನಿರ್ವಹಿಸುವಂತೆ..
ನವದೆಹಲಿ: 2014ರ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಗೆಲುವಿಗಾಗಿ ಕಾಂಗ್ರೆಸ್ ನಾಯಕರಿಗೆ ರಚನಾತ್ಮಕವಾಗಿ ಕಾರ್ಯನಿರ್ವಹಿಸುವಂತೆ ಕಾಂಗ್ರೆಸ್ ಉಪಾಧ್ಯಕ್ಷ ರಾಹಲ್ ಗಾಂಧಿ ಅವರು ಸೋಮವಾರ ಹೇಳಿದ್ದಾರೆ.
ಎರಡು ದಿನ ನಡೆಯಲಿರುವ ಮಾಧ್ಯಮ ಕಾರ್ಯಗಾರವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪಕ್ಷದ ಗೆಲುವಿನ ಹಿಂದೆ ಕಾರ್ಯಕರ್ತರ ದುಡಿಮೆ ಇರುತ್ತದೆ. ಇಂತಹ ಕಾರ್ಯಕರ್ತರು ಹಾಗೂ ನಾಯಕರು ಸಕಾರಾತ್ಮಕವಾಗಿ ಕಾರ್ಯ ನಿರ್ವಹಿಸಿದರೆ ಗೆಲುವು ನಮ್ಮದಾಗುತ್ತದೆ ಎಂದಿದ್ದಾರೆ.
ಜನ ಕಾಂಗ್ರೆಸ್‌ನ್ನು ಅಧಿಕಾರಕ್ಕೆ ತರಬೇಕಂದರೆ ನಾಯಕರು ಹಾಗೂ ಕಾರ್ಯಕರ್ತರನ್ನು ನೋಡಿ ಮತ ಚಲಾಯಿಸುತ್ತಾರೆ. ಜನರ ಮತ ಬೇಕೆಂದರೆ ಅವರ ನಂಬಿಕೆಗೆ ನಮ್ಮ ಪಕ್ಷ ಭಾಜನರಾಗಿಬೇಕು. ಜನರ ನಂಬಿಕೆ ಉಳಿಸುವುದು ಕಾಂಗ್ರೆಸ್ ನಾಯಕರಿಂದಲೇ ಸಾಧ್ಯ ಎಂದು ಅವರು ತಿಳಿಸಿದ್ದಾರೆ.
ಪಕ್ಷದ ನಾಯಕರು ರಚನಾತ್ಮಕವಾಗಿರಬೇಕು. ಕಾಂಗ್ರೆಸ್ ಪಕ್ಷದ ಧ್ಯೇಯಗಳನುಸಾರ ಕೆಲಸ ನಿರ್ವಹಿಸಿಬೇಕು. ಭೇದಗಳಿಲ್ಲದೇ ಒಗ್ಗಟ್ಟಿನ ಮಂತ್ರ ಜಪಿಸಿ ಕಾರ್ಯ ನಿರ್ವಹಿಸಿದರೆ ಮಾತ್ರ ಪಕ್ಷ ಅಧಿಕಾರಕ್ಕೆ ಬರಲು ಸಾಧ್ಯ ಎಂದು ರಾಹುಲ್ ಸಲಹೆ ನೀಡಿದ್ದಾರೆ.