ಕೆರೆಗೆ ಬಿದ್ದ ಕೆಎಸ್ಆರ್ಟಿಸಿ ಬಸ್: 8 ಸಾವು
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್ಆರ್ಟಿಸಿ)ಯ ಬಸ್ಸೊಂದು ಹಾಸನ ಜಿಲ್ಲೆಯ ಬೇಲೂರಿನ..
ಹಾಸನ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್ಆರ್ಟಿಸಿ)ಯ ಬಸ್ಸೊಂದು ಹಾಸನ ಜಿಲ್ಲೆಯ ಬೇಲೂರಿನ ಕೆರೆಗೆ ಉರುಳಿಬಿದ್ದ ಪರಿಣಾಮ 8 ಮಂದಿ ಮೃತಪಟ್ಟಿದ್ದಾರೆ. ಇನ್ನು ಗಾಯಗೊಂಡ 25ಕ್ಕು ಹೆಚ್ಚು ಪ್ರಯಾಣಿಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಕಲೇಶಪುರದಿಂದ ಬೇಲೂರಿಗೆ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ ಇಂದು ಬೆಳಗ್ಗೆ 10 ಗಂಟೆಯ ಸುಮಾರಿಗೆ ಬೇಲೂರು ಬಳಿ ಇರುವ ವಿಷ್ಣು ಸಮುದ್ರದ ಕೆರೆಗೆ ಬಿದ್ದಿದೆ.
ಸ್ಥಳಕ್ಕೆ ಅಗ್ನಿಶಾಮಕ ದಳ ಹಾಗೂ ಪೊಲೀಸರು ಧಾವಿಸಿದ್ದು, ರಕ್ಷಣಾ ಕಾರ್ಯ ನಡೆಯುತ್ತಿದೆ. ಈವರೆಗೆ 8 ಶವಗಳನ್ನು ಹೊರ ತೆಗೆಯಲಾಗಿದೆ ಮತ್ತು ಸಾವಿನ ಸಂಖ್ಯೆ ಇನ್ನು ಹೆಚ್ಚುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಎರಡು ಕ್ರೇನ್ಗಳ ಮೂಲಕ ಬಸ್ ಅನ್ನು ಕೆರೆಯಿಂದ ಹೊರಗೆ ತೆಗೆಯಲಾಗಿದೆ.
ಬಸ್ಸಿನಲ್ಲಿ ಸುಮಾರು 50ರಿಂದ 60 ಮಂದಿ ಪ್ರಯಾಣಿಸುತ್ತಿದ್ದರು. ಈ ಪೈಕಿ ಶಾಲಾ ಮಕ್ಕಳು ಹಾಗೂ ಕಾಲೇಜ್ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಇದ್ದರು ಎನ್ನಲಾಗಿದೆ.
ಬಸ್ನ ಸ್ಟೇರಿಂಗ್ ತುಂಡಾಗಿ ಈ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆದರೆ ಘಟನೆಗೆ ನಿಖರ ಕಾರಣ ಇನ್ನು ತಿಳಿದು ಬಂದಿಲ್ಲ.
ಮೃತಪಟ್ಟವರ ವಿವರ
ಬಸ್ ಕಂಡಕ್ಟರ್ ವಿಶ್ವನಾಥ್
ಸಿಂಗಟಗೇರಿಯ ಲೋಕೇಶ್ ನಾಯಕ್
ಹರೇಹಳ್ಳಿಯ ಮಹಮದ್
ನಂದಗೌಡನಹಳ್ಳಿಯ ಗೋಪಾಲ್
ಎಂಟತೊಳಲಿನ ತಮ್ಮಣ್ಣಗೌಡ
ವೆಂಕಟಪೇಟೆಯ ಸೌಮ್ಯ
ಕಡೆಗೆಜ್ಜೆಯ ಪಿಂಟೋ