ಬೇಲೂರು ಬಸ್ ದುರಂತ: ಮೃತರ ಕುಟುಂಬಕ್ಕೆ 3 ಲಕ್ಷ ಪರಿಹಾರ
ಹಾಸನ ಜಿಲ್ಲೆಯ ಬೇಲೂರಿನ ವಿಷ್ಣುಸಮುದ್ರ ಕೆರೆಗೆ ಕೆಎಸ್ಆರ್ಟಿಎಸ್ ಬಸ್ ಉರುಳಿ ಬಿದ್ದ ಪರಿಣಾಮ..
ಹಾಸನ: ಹಾಸನ ಜಿಲ್ಲೆಯ ಬೇಲೂರಿನ ವಿಷ್ಣುಸಮುದ್ರ ಕೆರೆಗೆ ಕೆಎಸ್ಆರ್ಟಿಎಸ್ ಬಸ್ ಉರುಳಿ ಬಿದ್ದ ಪರಿಣಾಮ 8 ಮಂದಿ ಮೃತಪಟ್ಟಿದ್ದು, ಮೃತರ ಕುಟುಂಬಕ್ಕೆ ಸರ್ಕಾರ ಪರಿಹಾರ ಘೋಷಿಸಿದೆ.
ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು, ಮೃತರ ಕುಟುಂಬಕ್ಕೆ ತಲಾ ಮೂರು ಲಕ್ಷ ರುಪಾಯಿ ಪರಿಹಾರ ಘೋಷಿಸಿದರು. ಅಲ್ಲದೆ ಗಾಯಾಳುಗಳ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಅವರು ತಿಳಿಸಿದರು.
ನಂತರ ಹಾಸನ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿದ ಸಚಿವರು, ಗಾಯಾಳುಗಳ ಆರೋಗ್ಯ ವಿಚಾರಿಸಿದರು. ರಾಮಲಿಂಗಾರೆಡ್ಡಿ ಅವರಿಗೆ ಉಸ್ತುವಾರಿ ಸಚಿವ ಎಚ್.ಸಿ.ಮಹದೇವಪ್ಪ ಅವರು ಸಾಥ್ ನೀಡಿದರು.
ಸಕಲೇಶಪುರದಿಂದ ಬೇಲೂರಿಗೆ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್ ಇಂದು ಬೆಳಗ್ಗೆ 10 ಗಂಟೆಯ ಸುಮಾರಿಗೆ ಬೇಲೂರು ಬಳಿ ಇರುವ ವಿಷ್ಣು ಸಮುದ್ರದ ಕೆರೆಗೆ ಉರುಳಿ ಬಿದ್ದಿತ್ತು.