ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಸಂಜಯ್ ದತ್ ಮೇಲ್ಮನವಿ ತಿರಸ್ಕೃತ

1993 ಮುಂಬೈ ಸರಣಿ ಬಾಂಬ್ ಸ್ಫೋಟ ಪ್ರಕರಣದ ದೋಷಿ, ಬಾಲಿವುಡ್ ನಟ ಸಂಜಯ್ ದತ್ ಸಲ್ಲಿಸಿರುವ ಮೇಲ್ಮನವಿಯನ್ನು...

Rashmi Kasaragodu
Updated On : 23 Jul 2013, 6:23 am

ನವದೆಹಲಿ: 1993 ಮುಂಬೈ ಸರಣಿ ಬಾಂಬ್ ಸ್ಫೋಟ ಪ್ರಕರಣದ ದೋಷಿ, ಬಾಲಿವುಡ್ ನಟ ಸಂಜಯ್ ದತ್ ಸಲ್ಲಿಸಿರುವ ಮೇಲ್ಮನವಿಯನ್ನು ಸುಪ್ರೀಂಕೋರ್ಟ್ ಮಂಗಳವಾರ ತಿರಸ್ಕರಿಸಿದೆ .

ಪ್ರಸ್ತುತ ಪ್ರಕರಣದಲ್ಲಿ ಸರ್ವೋಚ್ಛ ನ್ಯಾಯಾಲಯ ಈ ಹಿಂದೆ ನೀಡಿರುವ ಆದೇಶವನ್ನು ಮತ್ತೊಮ್ಮೆ ಪರಿಶೀಲನೆಗೊಳಪಡಿಸಬೇಕೆಂದು ಆಗ್ರಹಿಸಿ ದತ್ ಮೇಲ್ಮನವಿ ಸಲ್ಲಿಸಿದ್ದರು.

ಕಳೆದ ಬಾರಿ ದತ್ ಪುನರ್ ಪರಿಶೀಲನಾ ಮನವಿ ಸಲ್ಲಿಸಿದ್ದು, ಅದು ತಳ್ಳಿ ಹಾಕಲ್ಪಟ್ಟ ಮೇಲೆ ಕಾನೂನು ಹೋರಾಟದಲ್ಲಿ ತಮ್ಮ ಕೊನೆಯ ಅಸ್ತ್ರವೆಂಬಂತೆ ಈ ಮೇಲ್ಮನವಿ ಸಲ್ಲಿಸಿದ್ದರು.

 1993 ಮುಂಬೈ ಸರಣಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನ್ನ ಬಳಿ ಮಾರಕಾಯುಧಗಳನ್ನು ಇರಿಸಿಕೊಂಡಿದ್ದಕ್ಕಾಗಿ ಕಳೆದ ಮಾರ್ಚ್ ತಿಂಗಳಲ್ಲಿ ದತ್‌ಗೆ 5 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿತ್ತು.

ಇದೀಗ ಪುಣೆಯ ಯೆರ್ವಾಡ ಜೈಲಿನಲ್ಲಿ ದತ್ ಜೈಲು ಶಿಕ್ಷೆ ಅನುಭವಿಸುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement