ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ನಟ ಸಲ್ಮಾನ್ ಖಾನ್ ವಿರುದ್ಧ ಚಾರ್ಜ್ ಶೀಟ್ ದಾಖಲು

2002ರ ಹಿಟ್ ಆಂಡ್ ರನ್ ಪ್ರಕರಣ ಸಂಬಂಧ ಬಾಲಿವುಡ್ ನಟ ಸಲ್ಮಾನ್ ಖಾನ್ ವಿರುದ್ಧ ಬುಧವಾರ ಚಾರ್ಜ್ ಶೀಟ್ ದಾಖಲಿಸಲಾಗಿದ್ದು,..

Lingaraj Badiger
Updated On : 24 Jul 2013, 1:11 am

ಮುಂಬೈ: 2002ರ ಹಿಟ್ ಆಂಡ್ ರನ್ ಪ್ರಕರಣ ಸಂಬಂಧ ಬಾಲಿವುಡ್ ನಟ ಸಲ್ಮಾನ್ ಖಾನ್ ವಿರುದ್ಧ ಬುಧವಾರ  ಚಾರ್ಜ್ ಶೀಟ್ ದಾಖಲಿಸಲಾಗಿದ್ದು, ಆರೋಪ ಸಾಬೀತಾದರೆ ನಟನಿಗೆ ಹತ್ತು ವರ್ಷ ಜೈಲು ಶಿಕ್ಷೆಯಾಗಲಿದೆ.

ಶಿಕ್ಷಾರ್ಹ ನರಹತ್ಯೆ ಆರೋಪದ ಮೇಲೆ ಐಪಿಸಿ ಸೆಕ್ಷನ್ 304(2), 379, 338, 427 ಅಡಿ ಸಲ್ಮಾನ್ ವಿರುದ್ಧ ಮುಂಬೈ ಸೆಷನ್ಸ್ ಕೋರ್ಟ್ ಕೇಸ್ ದಾಖಲಿಸಿಕೊಂಡಿದೆ.

ಇಂದು ಪ್ರಕರಣದ ವಿಚಾರಣೆಯನ್ನು ಮತ್ತೊಂದು ಪೀಠಕ್ಕೆ ವರ್ಗಾಯಿಸಿರುವ ಮುಂಬೈ ಸೆಷನ್ಸ್ ಕೋರ್ಟ್, ಖುದ್ದು ಹಾಜರಾತಿಯಿಂದ ಸಲ್ಮಾನ್ ಖಾನ್ ಅವರಿಗೆ ವಿನಾಯ್ತಿ ನೀಡಿದೆ.

ಈ ಮುಂಚೆ ಪ್ರಕರಣವನ್ನು ಐಪಿಸಿ ಸೆಕ್ಷನ್ 302 (ಕೊಲೆ) ಬದಲಿಗೆ 304(2)(ನಿರ್ಲಕ್ಷ್ಯದಿಂದ ಸಾವು) ಪ್ರಕರಣಕ್ಕೆ ಬದಲಾಯಿಸಬೇಕು ಎಂದು ಕೋರಿ ಸಲ್ಮಾನ್ ಸಲ್ಲಿಸಿದ್ದ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ.

ಸಲ್ಮಾನ್ ಖಾನ್ ಅವರ ಲಾಂಡ್ ಕ್ರೂಸರ್ ವಾಹನ ಸೆಪ್ಟೆಂಬರ್ 28, 2002ರಂದು ಮುಂಬೈನ ಬಾಂದ್ರಾದಲ್ಲಿನ ಬೇಕರಿವೊಂದಕ್ಕೆ ನುಗ್ಗಿತ್ತು. ಈ ಅಪಘಾತದಲ್ಲಿ ಓರ್ವ ಮೃತಪಟ್ಟು, ನಾಲ್ವರು ಗಾಯಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement