2014ರ ಲೋಕಸಭೆ ಚುನಾವಣೆ ಬಿಜೆಪಿಗೆ ಪೂರಕ: ಆಡ್ವಾಣಿ
ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರು ಬಿಜೆಪಿ ಚುನಾವಣಾ ಪ್ರಚಾರ ಸಮಿತಿ..
ನವದೆಹಲಿ: ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರು ಬಿಜೆಪಿ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಮುನಿಸಿಕೊಂಡು ಮೌನವಾಗಿದ್ದ ಬಿಜೆಪಿ ಹಿರಿಯ ನಾಯಕ ಎಲ್.ಕೆ.ಆಡ್ವಾಣಿ ಅವರು, 2014ರ ಲೋಕಸಭೆ ಚುನಾವಣೆ ಬಿಜೆಪಿಗೆ ಪೂರಕವಾಗಿದೆ ಎಂದು ಶನಿವಾರ ಹೇಳಿದ್ದಾರೆ.
ಮೋದಿ ಆಯ್ಕೆಯ ನಂತರ ಮೊದಲ ಬಾರಿಗೆ ಮೌನ ಮುರಿದು ಮಾತನಾಡಿರುವ ಆಡ್ವಾಣಿ, ಮುಂಬರುವ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ದಾಖಲೆಯ ಜಯ ಸಾಧಿಸಲಿದೆ ಎಂದಿದ್ದಾರೆ.
ಚುನಾವಣೆಗೆ ಸಿದ್ಧವಾಗಿ ಎಂದು ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿರುವ ಬಿಜೆಪಿ ವರಿಷ್ಠ, ಕಾಂಗ್ರೆಸ್ ಪಕ್ಷ ಭ್ರಷ್ಟಾಚಾರ, ದುರಾಡಳಿತದಿಂದ ನಲುಗಿದೆ. 2014ರ ಚುನಾವಣೆಯಲ್ಲಿ ಬಿಜೆಪಿ ಇವುಗಳನ್ನೇ ಪ್ರಮುಖವಾಗಿ ಬಿಂಬಿಸಿದರೆ ಸಾಕು ಎಂದು ಹೇಳಿದ್ದಾರೆ.