ಐಎಎಸ್ ಅಧಿಕಾರಿ ಅಮಾನತು ಖಂಡಿಸಿ ಕಿರಣ್ ಬೇಡಿ ಪ್ರತಿಭಟನೆ
ನವದೆಹಲಿ: ಅಕ್ರಮ ಗಣಿಗಾರಿಕೆ ತಡೆದ ಹಿನ್ನಲೆಯಲ್ಲಿ ಐಎಎಸ್ ಅಧಿಕಾರಿ ದುರ್ಗಾ ಶಕ್ತಿ ನಾಗಪಾಲ್ ಅವರನ್ನು ಅಮಾನತಗೊಳಿಸಿರುವುದನ್ನು ಖಂಡಿಸಿ ಕಿರಣ್ ಬೇಡಿ ಸೋಮವಾರ ಪ್ರತಿಭಟಿಸಿದ್ದಾರೆ.
ಐಎಎಸ್ ಅಧಿಕಾರಿ ದುರ್ಗಾ ನಾಗಪಾಲ್ ಅವರು ಅಕ್ರಮ ಗಣಿಗಾರಿಕೆ ಮತ್ತು ಅಕ್ರಮ ಮರಳು ಸಾಗಾಣೆಯನ್ನು ತಡೆದು ನಿಲ್ಲಿಸಿದ ಪರಿಣಾಮ ಅವರನ್ನು ಸರ್ಕಾರ ಅಮಾನತುಗೊಳಿಸಿದೆ.
ಒಬ್ಬ ಐಎಎಎಸ್ ಅಧಿಕಾರಿ ಅಕ್ರಮ ಗಣಿಗಾರಿಕೆಯನ್ನು ತಡೆದು ನಿಲ್ಲಿಸಿ ಒಳ್ಳೆ ಕೆಲಸ ಮಾಡಿದ್ದಾರೆ. ಆದರೆ ಇದರ ಬಗ್ಗೆ ಯಾವುದೇ ತನಿಖೆ ಹಾಗೂ ವಿಚಾರಣೆ ನಡೆಸದೇ ಅವರನ್ನು ಅಮಾನತು ಮಾಡಿರುವುದು ಖಂಡನೀಯ ಎಂದು ಕಿರಣ್ ಬೇಡಿ ಹೇಳಿದ್ದಾರೆ.
ಉತ್ತರ ಪ್ರದೇಶದ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರು ಇದಕ್ಕೆ ಉತ್ತರಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ. ಉತ್ತರ ಪ್ರದೇಶದ ಐಎಎಸ್ ಅಧಿಕಾರಗಳ ಸಂಘ ರಾಜ್ಯ ಮುಖ್ಯ ಕಾರ್ಯದರ್ಶಿಗಳನ್ನು ಭೇಟಿ ಮಾಡಿ ಅಮಾನತಿನ ಪರೀಶೀಲಿಸುವಂತೆ ಕೋರಿ ಮನವಿ ಪತ್ರ ಸಲ್ಲಿಸಿದ್ದಾರೆ.