ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಸ್ಪಾಟ್ ಫಿಕ್ಸಿಂಗ್: ಬಿಸಿಸಿಐ ತನಿಖಾ ವರದಿ ವಜಾ

ಸ್ಪಾಟ್ ಫಿಕ್ಸಿಂಗ್ ಮತ್ತು ಬೆಟ್ಟಿಂಗ್ ಪ್ರಕರಣ ಸಂಬಂಧ ಬಿಸಿಸಿಐ ನೀಡಿದ್ದ ತನಿಖಾ ವರದಿಯನ್ನು ಮಂಗಳವಾರ..

Lingaraj Badiger
Updated On : 30 Jul 2013, 12:32 pm

ಮುಂಬೈ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ಯ ಅಧ್ಯಕ್ಷ ಶ್ರೀನಿವಾಸನ್ ಅವರಿಗೆ ಭಾರಿ ಹಿನ್ನಡೆಯಾಗಿದ್ದು, ಸ್ಪಾಟ್ ಫಿಕ್ಸಿಂಗ್ ಮತ್ತು ಬೆಟ್ಟಿಂಗ್ ಪ್ರಕರಣ ಸಂಬಂಧ ಬಿಸಿಸಿಐ ನೀಡಿದ್ದ ತನಿಖಾ ವರದಿಯನ್ನು ಮಂಗಳವಾರ ಬಾಂಬೆ ಹೈಕೋರ್ಟ್ ವಜಾಗೊಳಿಸಿದೆ.

ಬಿಸಿಸಿಐ ತನಿಖಾ ವರದಿಯನ್ನು ವಜಾಗೊಳಿಸಿ ಆದೇಶಿಸಿರುವ ಕೋರ್ಟ್, ತನಿಖಾ ತಂಡದ ರಚನೆಯೇ ಕಾನೂನು ಬಾಹಿರವಾಗಿದೆ. ಹೀಗಾಗಿ ಹೊಸದಾಗಿ ತನಿಖಾ ತಂಡ ರಚಿಸುವಂತೆ ಬಿಸಿಸಿಐಗೆ ಸೂಚಿಸಿದೆ. ಅಲ್ಲದೆ ತನಿಖಾ ವರದಿಯಲ್ಲಿ ಬಿಸಿಸಿಐ ಅಧ್ಯಕ್ಷ ಶ್ರೀನಿವಾಸನ್ ಹಾಗೂ ಅವರ ಅಳಿಯ ಗುರುನಾಥ್ ಮೇಯಪ್ಪನ್ ಮತ್ತು ರಾಜಸ್ಥಾನ ರಾಯಲ್ಸ್ ತಂಡದ ಸಹ ಮಾಲೀಕ ರಾಜ್ ಕುಂದ್ರ ಅವರಿಗೆ ಕ್ಲೀನ್ ಚಿಟ್ ನೀಡಿದ್ದು ಸಹ ಕಾನೂನು ಬಾಹಿರ ಎಂದು ಹೈಕೋರ್ಟ್ ಅಭಿಪ್ರಾಯ ಪಟ್ಟಿದೆ.

ಹೈಕೋರ್ಟ್ ಮಾಜಿ ನ್ಯಾಯಮೂರ್ತಿಗಳಾದ ಜಯರಾಮ್ ಚೌಟಾ ಮತ್ತು ಆರ್. ಬಾಲಸುಬ್ರಮಣ್ಯನ್ ಅವರನ್ನೊಳಗೊಂಡ ಇಬ್ಬರು ಸದಸ್ಯರ ಸಮಿತಿಯನ್ನು ಫಿಕ್ಸಿಂಗ್ ಪ್ರಕರಣದ ತನಿಖೆ ನಡೆಸಲು ಬಿಸಿಸಿಐ ನೇಮಿಸಿತ್ತು. ಶ್ರೀನಿವಾಸನ್ ಅಳಿಯ ಗುರುನಾತ್ ಮೇಯಪ್ಪನ್ ಮತ್ತು ರಾಜಸ್ಥಾನ ರಾಯಲ್ಸ್ ತಂಡದ ಸಹ ಮಾಲೀಕ ರಾಜ್ ಕುಂದ್ರಾ ಬಗ್ಗೆ, ಈ ತನಿಖಾ ಸಮಿತಿ ಕ್ಲೀನ್ ಚಿಟ್ ನೀಡಿತ್ತು.

ಕೋಲ್ಕತಾದಲ್ಲಿ ಭಾನುವಾರ ನಡೆದ ಬಿಸಿಸಿಐ ಸಭೆಯಲ್ಲಿ ಸಮಿತಿ ಸಲ್ಲಿಸಿದ್ದ ವರದಿಯಲ್ಲಿ ಕಳಂಕಿತರ ವಿರುದ್ಧ ಯಾವುದೇ ರೀತಿಯ ಸಾಕ್ಷ್ಯಗಳು ದೊರಕಿರಲಿಲ್ಲ ಎಂದು ತಿಳಿಸಲಾಗಿದೆ. 'ರಾಜ್ ಕುಂದ್ರಾ ಅಥವಾ ಗುರುನಾಥ್ ಮೇಯಪ್ಪನ್ ಯಾವುದೇ ರೀತಿ ತಪ್ಪು ಮಾಡಿರುವ ಕುರಿತು ತನಿಖೆಯಲ್ಲಿ ಸಾಕ್ಷ್ಯಗಳು ದೊರಕಿಲ್ಲ. ಈಗ ಈ ವರದಿಯನ್ನು ಐಪಿಎಲ್ ಆಡಳಿತ ಮಂಡಳಿಗೆ ಸಲ್ಲಿಸಲಾಗುತ್ತದೆ. ಹೀಗಾಗಿ ಆಗಸ್ಟ್ 2ರಂದು ದೆಹಲಿಯಲ್ಲಿ ಸಭೆ ಸೇರಲಿರುವ ಅದು ಅಂತಿಮ ತೀರ್ಮಾನ ತೆಗೆದುಕೊಳ್ಳಲಿದೆ' ಎಂದು ವರದಿ ಸ್ವೀಕರಿಸಿದ ನಂತರ ಬಿಸಿಸಿಐ ಉಪಾಧ್ಯಕ್ಷ ನಿರಂಜನ್ ಶಾ ಹೇಳಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement