ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಉತ್ತರ ಪ್ರದೇಶ ವಿಭಜನೆಗೆ ಮಾಯಾವತಿ ಆಗ್ರಹ

ಅಖಂಡ ಆಂಧ್ರಪ್ರದೇಶ ವಿಭಜನೆ ಮಾಡಿ, ಪ್ರತ್ಯೇಕ ತೆಲಂಗಾಣ ರಾಜ್ಯ ರಚನೆಗೆ ಕೇಂದ್ರ ಸರ್ಕಾರ ಹಸಿರು ನಿಶಾನೆ ತೋರಿದ..

Lingaraj Badiger
Updated On : 31 Jul 2013, 7:34 am

ಲಖನೌ: ಅಖಂಡ ಆಂಧ್ರಪ್ರದೇಶ ವಿಭಜನೆ ಮಾಡಿ, ಪ್ರತ್ಯೇಕ ತೆಲಂಗಾಣ ರಾಜ್ಯ ರಚನೆಗೆ ಕೇಂದ್ರ ಸರ್ಕಾರ ಹಸಿರು ನಿಶಾನೆ ತೋರಿದ ಬೆನ್ನೆಲ್ಲೇ, ಉತ್ತರ ಪ್ರದೇಶವನ್ನು ವಿಭಜನೆ ಮಾಡಿ ನಾಲ್ಕು ಪ್ರತ್ಯೇಕ ರಾಜ್ಯ ರಚನೆ ಮಾಡಬೇಕು ಎಂದು ಬುಧವಾರ ಬಹುಜನ ಸಮಾಜ ಪಕ್ಷ(ಬಿಎಸ್‌ಪಿ) ಆಗ್ರಹಿಸಿದೆ.

ಈ ಸಂಬಂಧ ಇಂದು ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಬಿಎಸ್‌ಪಿ ಮುಖ್ಯಸ್ಥೆ ಮಾಯಾವತಿ ಅವರು, ನಾವು ಯಾವಾಗಲೂ ಸಣ್ಣ ಸಣ್ಣ ರಾಜ್ಯಗಳನ್ನು ಬೆಂಬಲಿಸುತ್ತಾ ಬಂದಿದ್ದೇವೆ ಎಂದರು.

ಉತ್ತರ ಪ್ರದೇಶವನ್ನು ಪೂರ್ವಾಂಚಲ, ಬುಂದೇಲಖಂಡ, ಔಧ್ ಪ್ರದೇಶ ಹಾಗೂ ಪಶ್ಚಿಮ ಪ್ರದೇಶ ಎಂದು ನಾಲ್ಕು ಸಣ್ಣ ಸಣ್ಣ ರಾಜ್ಯಗಳನ್ನಾಗಿ ವಿಭಜಿಸಬೇಕು ಎಂದು ಮಾಯಾವತಿ ಆಗ್ರಹಿಸಿದರು. ಅಲ್ಲದೆ ಈ ರೀತಿಯಾಗಿ ನಾಲ್ಕು ರಾಜ್ಯಗಳಿಗೆ ಜನಸಂಖ್ಯೆ ಹಂಚಿಕೆಯಾಗುವುದರಿಂದ ಅಭಿವೃದ್ಧಿಯ ಪ್ರಮಾಣವೂ ಹೆಚ್ಚಾಗಲಿದೆ ಎಂದು ತಿಳಿಸಿದರು.

ಉತ್ತರ ಪ್ರದೇಶವನ್ನು ವಿಭಜನೆ ಮಾಡಿ, ನಾಲ್ಕು ಪ್ರತ್ಯೇಕ ರಾಜ್ಯ ರಚನೆ ಮಾಡಬೇಕು ಎಂದು ಉತ್ತರ ಪ್ರದೇಶದ ಕೇಂದ್ರ ಸಚಿವರು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದು ಮಾಯಾ ಒತ್ತಾಯಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement