ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಐಎಎಸ್ ಅಧಿಕಾರಿ ಅಮಾನತು ಪ್ರಶ್ನಿಸಿ ನ್ಯಾಯಾಲಯಕ್ಕೆ ಪಿಐಎಲ್

Mainashree
Updated On : 31 Jul 2013, 2:55 am

ಲಖನೌ: ಉತ್ತರ ಪ್ರದೇಶದ ಐಎಎಸ್ ಅಧಿಕಾರಿ ದುರ್ಗಾ ಶಕ್ತಿ ನಾಗಪಾಲ್ ಅವರ ಅಮಾನತು ಪ್ರಶ್ನಿಸಿ ಬುಧವಾರ ಅಲಹಬಾದ್ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.

ಸಾಮಾಜಿಕ ಕಾರ್ಯರ್ತ ನುತನ್ ಠಾಕುರ್ ಅವರು ಐಎಎಸ್ ಅಧಿಕಾರಿ ಅಮಾನತು ಪ್ರಶ್ನಿಸಿ ಇಂದು ಅಲಹಾಬಾದ್ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.

ಅಕ್ರಮ ಗಣಿಗಾರಿಕೆ ತಡೆದ ಹಿನ್ನಲೆಯಲ್ಲಿ ಐಎಎಸ್ ಅಧಿಕಾರಿ ದುರ್ಗಾ ಶಕ್ತಿ ನಾಗಪಾಲ್ ಅವರನ್ನು ಅಮಾನತುಗೊಳಿಸಲಾಗಿತ್ತು.

ಇದನ್ನು ವಿರೋಧಿಸಿ ಉತ್ತರ ಪ್ರದೇಶದ ಐಎಎಸ್ ಅಧಿಕಾರಿಗಳ ಸಂಘ ಪ್ರತಿಭಟನೆ ನಡೆಸಿತ್ತು.

ಇದರ ಬೆನ್ನಲ್ಲೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ. ಅರ್ಜಿಯ ವಿಚಾರಣೆ ಆಗಸ್ಟ್ 1ರಂದು ನಡೆಯಲಿದೆ. ಐಎಎಸ್ ಅಧಿಕಾರಿ ಅಮಾನತು ರದ್ದುಗೊಳಿಸಬೇಕು ಹಾಗೂ ರಾಜ್ಯ ಸರ್ಕಾರಗಳಿಂದ ಐಎಎಸ್ ಅಧಿಕಾರಿಗಳ ಮೇಲೆ ನಡೆಯುತ್ತಿರುವ ದೌರ್ಜನ್ಯಗಳ ಬಗ್ಗೆ ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳುವಂತೆ ಸೂಚಿಸಬೇಕು ಎಂದು ನ್ಯಾಯಾಲಯದಲ್ಲಿ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement