ದೆಹಲಿಯಲ್ಲಿ ಮಹಿಳೆಯರ ಭದ್ರತೆಗೆ ಕ್ರಮ: ಪೊಲೀಸ್
ನವದೆಹಲಿ: ದೆಹಲಿಯಲ್ಲಿ ಮಹಿಳೆಯರಿಗೆ ಹೆಚ್ಚು ಸುರಕ್ಷಿತ ಒದಗಿಸುವುದೇ ತಮ್ಮ ಮೊದಲ ಕರ್ತವ್ಯವಾಗಿದೆ ಎಂದು ನೂತನ ದೆಹಲಿ ಪೊಲೀಸ್ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ ಬಿಮ್ ಸೈನ್ ಬಸ್ಸಿ ಬುಧವಾರ ಹೇಳಿದ್ದಾರೆ.
ಭಾರತದ ರಾಜಧಾನಿಯಾಗಿರುವ ದೆಹಲಿಯಲ್ಲಿ ಮಹಿಳೆಯರಿಗೆ ಹೆಚ್ಚು ಸುರಕ್ಷಿತ ಒದಗಿಸಬೇಕಾಗಿದೆ. ಈ ಸಂಬಂಧ ನೂತನ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದ್ದಾರೆ.
ಈಗಾಗಲೇ ಮಹಿಳೆ ಸುರಕ್ಷಿತ ಬಗ್ಗೆ ಚಿಂತನೆ ನಡೆಸಲಾಗಿದೆ. ಮಹಿಳೆಯರಿಗೆ ಸುರಕ್ಷಿತವಿಲ್ಲದಂತ ಸ್ಥಳಗಳನ್ನು ಗುರುತಿಸಲಾಗಿದ್ದು, ಅಲ್ಲಿ ಹೆಚ್ಚು ಭದ್ರತೆ ಕಲ್ಪಿಸಲು ನಿರ್ಧರಿಸಲಾಗಿದೆ ಎಂದು ಬಿಮ್ ಸೈನ್ ಬಸ್ಸಿ ಹೇಳಿದ್ದಾರೆ.
ಸಮಾಜದಲ್ಲಿ ಮಹಿಳೆಯರ ಮೇಲೆ ಹೆಚ್ಚು ದೌರ್ಜನ್ಯ ನಡೆಸಲಾಗುತ್ತಿದೆ. ಇದನ್ನು ತಡೆಯಬೇಕಾಗಿದ್ದು, ಪೊಲೀಸರಿಗೆ ಇದೊಂದು ಸವಾಲಾಗಿದೆ. ಮಹಿಳೆಯರಿಗೆ ಪೊಲೀಸರು ರಕ್ಷಣೆ ನೀಡಲಿದ್ದು, ಅವರಲ್ಲಿ ಸುರಕ್ಷತೆ ಬಗ್ಗೆ ಆತ್ಮವಿಶ್ವಾಸ ಹೆಚ್ಚಿಸಬೇಕು ಎಂದು ಅವರು ತಿಳಿಸಿದ್ದಾರೆ.