ಮತ್ತೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ?
ವಾಹನ ಸವಾರರ ಜೇಬಿಗೆ ಮತ್ತೆ ಕತ್ತರಿ ಬೀಳಲಿದ್ದು, ಇಂದು ಮಧ್ಯೆ ರಾತ್ರಿಯಿಂದಲೇ ಪೆಟ್ರೋಲ್ ..
ನವದೆಹಲಿ: ವಾಹನ ಸವಾರರ ಜೇಬಿಗೆ ಮತ್ತೆ ಕತ್ತರಿ ಬೀಳಲಿದ್ದು, ಇಂದು ಮಧ್ಯೆ ರಾತ್ರಿಯಿಂದಲೇ ಡೀಸೆಲ್ ಹಾಗೂ ಪೆಟ್ರೋಲ್ ಬೆಲೆ ಏರಿಕೆಯಾಗುವ ಸಾಧ್ಯತೆ ಇದೆ.
ಪೆಟ್ರೋಲ್ ಬೆಲೆ ರು.1 ರಿಂದ 1.50ಪೈಸೆಯಷ್ಟು ಹೆಚ್ಚಳವಾಗುವ ಸಾಧ್ಯತೆ ಇದ್ದು, ಇನ್ನು ಡೀಸೆಲ್ ಬೆಲೆಯಲ್ಲೂ ಪ್ರತಿ ತಿಂಗಳಿನಂತೆ ಈ ತಿಂಗಳು 50 ಪೈಸೆ ಏರಿಯಾಗಲಿದೆ ಎಂದು ಮೂಲಗಳು ತಿಳಿಸಿವೆ.
ರುಪಾಯಿಯ ಮೌಲ್ಯ ದಾಖಲೆಯ ಕುಸಿತ ಕಂಡಿರುವುದೇ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆಗೆ ಕಾರಣ ಎನ್ನಲಾಗಿದೆ.