ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಸಹವಿದ್ಯಾರ್ಥಿಯಿಂದ ವಿದ್ಯಾರ್ಥಿನಿ ಮೇಲೆ ಹಲ್ಲೆ: ಸ್ಥಿತಿ ಚಿಂತಾಜನಕ

Mainashree
Updated On : 31 Jul 2013, 5:13 am

ನವದೆಹಲಿ: ಜವಹಾರ್‌ಲಾಲ್ ನೆಹರು ವಿಶ್ವವಿದ್ಯಾಲಯದಲ್ಲಿ ಒಂದೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಮೇಲೆ ಹಲ್ಲೆ ಮಾಡಿದ ವಿದ್ಯಾರ್ಥಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬುಧವಾರ ನಡೆದಿದೆ.

ಸಹ ವಿದ್ಯಾರ್ಥಿನಿ ಮೇಲೆ ಕೊಡಲಿಯಿಂದ ಹಲ್ಲೆ ಮಾಡಿದ ಆಕಾಶ್(23) ಎಂಬ ವಿದ್ಯಾರ್ಥಿ ನಂತರ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ಮೂಲಗಳು ತಿಳಿಸಿವೆ.

ಕೊಡಲಿಯಿಂದ ಹಲ್ಲೆಗೊಳಗಾದ ವಿದ್ಯಾರ್ಥಿನಿಯನ್ನು ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ದಾಖಲಿಸಿದ್ದು, ಸ್ಥಿತಿ ಚಿಂತಾಜನಕವಾಗಿದೆ.

ಕೊರಿಯನ್ ಭಾಷಾ ವಿಭಾಗದ ಕೊಠಡಿ ಸಂಖ್ಯೆ.213ರಲ್ಲಿ ಬೆಳಿಗ್ಗೆ 11.30 ಸಮಯದಲ್ಲಿ ವಿದ್ಯಾರ್ಥಿ ಹಲ್ಲೆ ಮಾಡಿ ನಂತರ ವಿಷ ಸೇವಿಸಿದ್ದಾನೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement