ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಅಕ್ರಮ ಆಸ್ತಿಗಳಿಕೆ: ಶಾಸಕ ಸುರೇಶ್ ಬಾಬು ವಿರುದ್ಧ ದೂರು

ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಬಳ್ಳಾರಿ ಜಿಲ್ಲೆಯ ಕಂಪ್ಲಿ ಬಿಎಸ್‌ಆರ್ ಕಾಂಗ್ರೆಸ್ ಶಾಸಕ..

Lingaraj Badiger
Updated On : 1 Aug 2013, 12:47 pm

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಲೆ ಬಳ್ಳಾರಿ ಜಿಲ್ಲೆಯ ಕಂಪ್ಲಿ ಬಿಎಸ್‌ಆರ್ ಕಾಂಗ್ರೆಸ್ ಶಾಸಕ ಸುರೇಶ್ ಬಾಬು ಅವರ ವಿರುದ್ಧ ಗುರುವಾರ ಲೋಕಾಯುಕ್ತದಲ್ಲಿ ದೂರು ದಾಖಲಾಗಿದೆ.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಸುರೇಶ್ ಬಾಬು ವಿರುದ್ಧ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಪರಾಜಿತ ಅಭ್ಯರ್ಥಿ ಗುಜ್ಜಲ್ ನಾಗರಾಜ್ ಅವರು ಇಂದು ಲೋಕಾಯುಕ್ತ ಎಡಿಜಿಪಿ ಸತ್ಯನಾರಾಯಣ ರಾವ್ ಅವರಿಗೆ ದೂರು ನೀಡಿದ್ದಾರೆ.

ಸುರೇಶ್ ಬಾಬು ಅವರು ಅಕ್ರಮವಾಗಿ ಆಸ್ತಿ ಸಂಪಾದನೆ ಮಾಡಿದ್ದಾರೆ ಎಂದು ಆರೋಪಿಸಿರುವ ನಾಗರಾಜ್, ಅವರ ಆಸ್ತಿ 2008ರಲ್ಲಿ 1.65 ಕೋಟಿ ಇತ್ತು. ಆದರೆ ಈಗ ಅದು 6.5 ಕೋಟಿ ರುಪಾಯಿಗೆ ಏರಿದೆ ಎಂದು ದೂರಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement