ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ತೀರ್ಮಾನದಿಂದ ಹಿಂದೆ ಸರಿಯುವುದಿಲ್ಲ: ಯು.ಟಿ.ಖಾದರ್

ಗುಟ್ಕಾ ನಿಷೇಧ ಕ್ರಮದಿಂದ ಸರ್ಕಾರ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ಅವರು ಹೇಳಿದ್ದಾರೆ.

Srinivasa Murthy VN
Updated On : 2 Jun 2013, 6:30 am

ಮಂಗಳೂರು: ಗುಟ್ಕಾ ನಿಷೇಧ ಕ್ರಮದಿಂದ ಸರ್ಕಾರ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಆರೋಗ್ಯ ಸಚಿವ ಯು.ಟಿ.ಖಾದರ್ ಅವರು ಹೇಳಿದ್ದಾರೆ.

ಮಂಗಳೂರಿನಲ್ಲಿ ಮಾತನಾಡಿದ ಆರೋಗ್ಯ ಸಚಿವ ಯು.ಟಿ.ಖಾದರ್ ಅವರು, ಗುಟ್ಕಾ ಕಂಪನಿಗಳ ಲಾಭಿಗೆ ತಮ್ಮ ಸರ್ಕಾರ ಮಣಿಯುವುದಿಲ್ಲ. ಯುವಕರ ಆರೋಗ್ಯವನ್ನು ದೃಷ್ಟಿಯಲ್ಲಿಟ್ಟುಕೊಂಡು ಸರ್ಕಾರ ರಾಜ್ಯದಲ್ಲಿ ಗುಟ್ಕಾ ಉತ್ಪನ್ನಗಳ ಮೇಲೆ ನಿಷೇಧ ಹೇರಿದೆ. ಇಂತಹ ಸಂದರ್ಭದಲ್ಲಿ ತಮ್ಮ ತೀರ್ಮಾನದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದು ಅವರು ಸ್ಪಷ್ಟಪಡಿಸಿದರು.

ಅಲ್ಲದೆ ಗುಟ್ಕಾ ನಿಷೇಧದಿಂದ ರಾಜ್ಯದ ಅಡಿಕೆ ರೈತರ ಮೇಲಾಗುವ ಪರಿಣಾಮಗಳ ಕುರಿತ ಮಾತನಾಡಿದ ಸಚಿವರು, ಗುಟ್ಕಾ ನಿಷೇಧ ಕ್ರಮದಿಂದ ಅಡಿಕೆ ರೈತರ ಮೇಲೆ ಯಾವುದೇ ರೀತಿಯ ದುಷ್ಪರಿಣಾಮಗಳಾಗುವುದಿಲ್ಲ. ಅಡಿಕೆ ಬೆಳೆಗಾರರ ಬೆಂಬಲಕ್ಕೆ ಸರ್ಕಾರ ಸಿದ್ಧವಿದ್ದು, ರೈತರ ಯಾವುದೇ ಸಮಸ್ಯೆಗೆ ಸರ್ಕಾರ ಸ್ಪಂದಿಸಲಿದೆ ಎಂದು ತಿಳಿಸಿದರು.

ಅಂತೆಯೇ ರಾಜ್ಯದಲ್ಲಿ ಡೆಂಘೀ ಹೆಚ್ಚಳ ಕುರಿತು ಮಾಹಿತಿ ನೀಡಿದ ಅವರು, ಡೆಂಘೀ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಕ್ರಮ ಕೈಗೊಂಡಿದೆ. ಇದಕ್ಕಾಗಿ ರಾಜ್ಯಾದ್ಯಂತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಎಲ್ಲ ಜಿಲ್ಲೆಗಳ ಆರೋಗ್ಯಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ರಾಜ್ಯದ ಜನತೆಗೆ ಡೆಂಘೀ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದ್ದು, ರಾಜ್ಯದ ಎಲ್ಲ ಶಾಲಾ ಮಕ್ಕಳ ಆರೋಗ್ಯ ತಪಾಸಣೆ ಮಾಡಲಾಗುತ್ತಿದೆ ಎಂದು ಸಚಿವ ಯು.ಟಿ.ಖಾದರ್ ಅವರು ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement