ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಶೀಲಾ ದೀಕ್ಷಿತ್ ಪ್ರತಿಸ್ಪರ್ಧಿಯಾಗಿ ಕೇಜ್ರಿವಾಲ್

ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ದೆಹಲಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ವಿರುದ್ಧ ಸ್ಪರ್ಧಿಸುವುದಾಗಿ ಹಮ್ ಆದ್ಮಿ ಪಕ್ಷದ ನಾಯಕ ಅರವಿಂದ್...

Vishwanath S
Updated On : 2 Jun 2013, 4:40 am

ನವದೆಹಲಿ: ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ದೆಹಲಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ವಿರುದ್ಧ ಸ್ಪರ್ಧಿಸುವುದಾಗಿ ಹಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

ಇಂದು ನಡೆದ ಎಎಪಿ ಪಕ್ಷದ ಸ್ವಯಂ ಪ್ರೇರಿತ ಅಭ್ಯರ್ಥಿ ಸಮಾವೇಶ ಸಂದರ್ಭದಲ್ಲಿ ಈ ನಿರ್ಣಯವನ್ನು ಕೈಗೊಳ್ಳಲಾಗಿದೆ. ದೆಹಲಿ ಮುಖ್ಯಮಂತ್ರಿ ಶೀಲಾ ದೀಕ್ಷಿತ್ ಅವರ ವಿರುದ್ಧ ಸ್ಪರ್ಧಿಸಲು ಸೂಕ್ತ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಸಂಬಂಧ ಚರ್ಚೆಗಳು ನಡೆದಿದ್ದು, ಶೀಲಾ ಪ್ರತಿಸ್ಪರ್ಧಿಯಾಗಿ ಅರವಿಂದ್ ಕೇಜ್ರಿವಾಲ್ ಸ್ಪರ್ಧಿಸುವುದು ಬಹುತೇಕ ಖಚಿತವಾಗಿದೆ. ಹೀಗಾಗಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಶೀಲಾ ದೀಕ್ಷಿತ್ ಹಾಗೂ ಅರವಿಂದ್ ಕೇಜ್ರಿವಾಲ್‌ರ ನಡುವೆ ನೇರ ಹಣಾಹಣಿ ನಡೆಯಲಿದೆ.

ಹಿಂದಿನ ಚುನಾವಣೆಯಲ್ಲಿ ಶೀಲಾ ದೀಕ್ಷಿತ್ ವಿರುದ್ಧ ದುರ್ಬಲ ಅಭ್ಯರ್ಥಿಯನ್ನು ಕಣಕ್ಕಿಸಿ ಸೋಲು ಅನುಭವಿಸಿದ್ದ ಎಎಪಿ ಪಕ್ಷ, ಇದೀಗ ಸೋಲಿನಿಂದ ಪಾಠ ಕಲಿತ್ತಿದ್ದು ಮುಂದಿನ ಚುನಾವಣೆಯಲ್ಲಿ ದಿಕ್ಷೀತ್ ವಿರುದ್ಧ ಅರವಿಂದ್ ಕೇಜ್ರಿವಾಲ್‌ರನ್ನೇ ಕಣಕ್ಕಿಳಿಸಲು ಮುಂದಾಗಿದೆ.

ದೆಹಲಿಯ ವಿಧಾನಸಭಾ ಚುನಾವಣೆಯ ಸಂಬಂಧ ರಾಜಕೀಯ ಪಕ್ಷಗಳು ತಮ್ಮ ಅಭ್ಯರ್ಥಿಗಳ ಆಯ್ಕೆ ಸಂಬಂಧ ಬೀರುಸಿನ ಕಾರ್ಯ ಆರಂಭಿಸಿವೆ. ಉತ್ತಮ ಸ್ಪರ್ಧಿಗಳನ್ನು ಕಣಕ್ಕಿಳಿಸುವ ಸಲುವಾಗಿ ಸೂಕ್ತ ಅಭ್ಯರ್ಥಿಗಳನ್ನು ಆಯ್ಕೆ ಮಾಡುವಲ್ಲಿ ಪೂರ್ವ ಸಿದ್ಧತೆಗಳನ್ನು ನಡೆಸುತ್ತಿವೆ.

ಈಗಾಗಲೇ ಎಎಪಿ ಪಕ್ಷ ಮನೀಶ್ ಸಿಸೋಧ್ಯ ಹಾಗೂ ಸಂಜಯ್ ಸಿಂಗ್ ಸೇರಿದಂತೆ 44 ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement