ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಮೇಯಪ್ಪನ್, ವಿಂದೂಗೆ ಜಾಮೀನು

ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಪ್ರಕರಣ ಸಂಬಂಧ ನ್ಯಾಯಾಂಗ ಬಂಧನದಲ್ಲಿದ್ದ ಬಿಸಿಸಿಐ ಅಧ್ಯಕ್ಷ ಎನ್.ಶ್ರೀನಿವಾಸನ್ ಅವರ ..

Lingaraj Badiger
Updated On : 4 Jun 2013, 12:11 pm

ಮುಂಬೈ: ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಪ್ರಕರಣ ಸಂಬಂಧ ನ್ಯಾಯಾಂಗ ಬಂಧನದಲ್ಲಿದ್ದ ಬಿಸಿಸಿಐ ಅಧ್ಯಕ್ಷ ಎನ್.ಶ್ರೀನಿವಾಸನ್ ಅವರ ಅಳಿಯ ಹಾಗೂ ಚೆನ್ನೈ ಸೂಪರ್ ಕಿಂಗ್ಸ್ ಮಾಲೀಕ ಗುರುನಾಥ್ ಮೇಯಪ್ಪನ್ ಮತ್ತು ಬಾಲಿವುಡ್ ನಟ ವಿಂದೂ ದಾರಾ ಸಿಂಗ್ ಅವರಿಗೆ ಮಂಗಳವಾರ ಮುಂಬೈ ಮ್ಯಾಜಿಸ್ಟ್ರೇಟ್ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

ನಿನ್ನೆ ಬಂಧಿತ ಮೇಯಪ್ಪನ್ ಹಾಗೂ ವಿಂದೂ ದಾರಾ ಸಿಂಗ್ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ್ದ ಮ್ಯಾಜಿಸ್ಟ್ರೇಟ್ ಕೋರ್ಟ್, ತೀರ್ಪು ಕಾಯ್ದಿರಿಸಿತ್ತು. ಇಂದು ತೀರ್ಪು ಪ್ರಕಟಿಸಿದ ಕೋರ್ಟ್, 25 ಸಾವಿರ ಶೂರಿಟಿ ಮೇಲೆ ಮೇಯಪ್ಪನ್ ಹಾಗೂ ವಿಂದೂ ದಾರಾ ಸಿಂಗ್ ಸೇರಿದಂತೆ ಇತರೆ ಮೂವರು ಬುಕ್ಕಿಗಳಿಗೂ ಜಾಮೀನು ನೀಡಿದೆ. ಅಲ್ಲದೆ ದೇಶ ಬಿಟ್ಟು ಹೊರ ಹೋಗುವಂತಿಲ್ಲ ಎಂಬ ಷರತ್ತನ್ನು ವಿಧಿಸಿದೆ ಮತ್ತು ಎರಡು ದಿನಕ್ಕೊಮ್ಮೆ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ.

ಐಪಿಎಲ್ ಸ್ಪಾಟ್ ಫಿಕ್ಸಿಂಗ್ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಮೇಲೆ ಕಳೆದ ಮೇ 25ರಂದು ಮೇಯಪ್ಪನ್ ಅವರನ್ನು ಬಂಧಿಸಲಾಗಿತ್ತು. ಇನ್ನು ಇದೇ ಪ್ರಕರಣ ಸಂಬಂಧ ಬಾಲಿವುಡ್ ನಟ ವಿಂದೂ ದಾರಾ ಸಿಂಗ್ ಅವರನ್ನು ಮೇ 22ರಂದು ಮುಂಬೈ ಪೊಲೀಸರು ಬಂಧಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement