3ನೇ ಬಾರಿ ಪಾಕ್ ಪ್ರಧಾನಿಯಾಗಿ ನವಾಜ್ ಷರೀಫ್ ಪ್ರಮಾಣ
ಪಾಕಿಸ್ತಾನದ 27 ಪ್ರಧಾನಮಂತ್ರಿಯಾಗಿ ನವಾಜ್ ಷರೀಫ್ ಅವರು ಬುಧವಾರ ಪ್ರಮಾಣವಚನ ಸ್ವೀಕರಿಸಿದರು...
ಇಸ್ಲಾಮಾಬಾದ್: ಪಾಕಿಸ್ತಾನದ 27 ಪ್ರಧಾನಮಂತ್ರಿಯಾಗಿ ನವಾಜ್ ಷರೀಫ್ ಅವರು ಬುಧವಾರ ಪ್ರಮಾಣವಚನ ಸ್ವೀಕರಿಸಿದರು.
ಪಾಕಿಸ್ತಾನದ ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಇಂದು ಮಧ್ಯಾಹ್ನ ಮೂರನೇ ಬಾರಿಗೆ ಪಾಕ್ ಪ್ರಧಾನಿಯಾಗಿ ನವಾಜ್ ಷರೀಫ್ ಅವರು ಅಧಿಕಾರ ಸ್ವೀಕರಿಸುವ ಮೂಲಕ ಮೂರನೇ ಬಾರಿಗೆ ಪಾಕ್ ಪ್ರಧಾನಿಯಾದ ಮೊದಲಿಗ ಎನಿಸಿಕೊಂಡರು. ಸಮಾರಂಭದಲ್ಲಿ ಭಾರತೀಯ ರಾಯಭಾರ ಕಚೇರಿಯ ಅಧಿಕಾರಿಗಳು ಭಾಗವಹಿಸಿದ್ದರು.
1981ರಲ್ಲಿ ತಮ್ಮ ರಾಜಕೀಯ ವೃತ್ತಿ ಜೀವನವನ್ನು ಆರಂಭಿಸಿದ ನವಾಜ್ ಷರೀಫ್ ಅವರು, 1990ರಲ್ಲಿ ಮೊದಲ ಬಾರಿಗೆ ಪಾಕ್ ಪ್ರಧಾನಿಯಾಗಿ ಆಯ್ಕೆಯಾಗಿದ್ದರು.
ಇತ್ತೀಚಿಗೆ ನಡೆದ ಪಾಕಿಸ್ತಾನದ ಸಾರ್ವತ್ರಿಕ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿದ್ದ ಪಿಎಂಎಲ್-ಎನ್ ಪಕ್ಷದ ಅಧ್ಯಕ್ಷರಾಗಿದ್ದ ಷರೀಫ್ ಅವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿತ್ತು.