ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಗುಜರಾತ್ ಉಪ ಚುನಾವಣೆ: 6 ಕ್ಷೇತ್ರಗಳಲ್ಲೂ ಬಿಜೆಪಿ ಗೆಲುವು

ಗುಜರಾತ್ ವಿಧಾನಸಭೆಯ ನಾಲ್ಕು ಹಾಗೂ ಎರಡು ಲೋಕಸಭೆ ಸ್ಥಾನಗಳಿಗೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ..

Lingaraj Badiger
Updated On : 5 Jun 2013, 1:10 am

ಅಹಮದಾಬಾದ್: ಗುಜರಾತ್ ವಿಧಾನಸಭೆಯ ನಾಲ್ಕು ಹಾಗೂ ಎರಡು ಲೋಕಸಭೆ ಸ್ಥಾನಗಳಿಗೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಎಲ್ಲಾ ಆರು ಸ್ಥಾನಗಳಲ್ಲೂ ಭರ್ಜರಿ ಜಯ ಗಳಿಸಿದೆ. ಈ ಮೂಲಕ ಮುಖ್ಯಮಂತ್ರಿ ನರೇಂದ್ರ ಮೋದಿಗೆ ಮತ್ತಷ್ಟು ಬಲ ಬಂದಂತಾಗಿದೆ.

ಪೋರಬಂದರ್ ಮತ್ತು ಬನಸ್ಕಾಂತ ಲೋಕಸಭಾ ಕ್ಷೇತ್ರಗಳಿಗೆ ಹಾಗೂ ಲಿಂಬ್ಡಿ, ಚೆತ್ಪುರ್, ಧೋರ್ಜಿ ಹಾಗೂ ಮಾರ್ವ ವಿಧಾನಸಭೆಗೆ ನಡೆದ ಉಪ ಚುನಾವಣೆಯಲ್ಲಿ ಬಿಜೆಪಿ ಎಲ್ಲ ಸ್ಥಾನಗಳಲ್ಲೂ ಗೆಲುವು ಸಾಧಿಸಿದೆ. ಈ ಎಲ್ಲ ಕ್ಷೇತ್ರಗಳಿಗೆ ಕಳೆದ ಭಾನುವಾರ ಮತದಾನ ನಡೆದಿತ್ತು.

ಗುಜರಾತ್ ಉಪ ಚುನಾವಣೆಯ ಫಲಿತಾಂಶ ಹೊರ ಬಿಳುತ್ತಿದ್ದಂತೆ ದೆಹಲಿಯಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಮೋದಿ, ಗುಜರಾತ್ ಉಪ ಚುನಾವಣೆಯ ಫಲಿತಾಂಶ ಕಾಂಗ್ರೆಸ್‌ಗೆ ಕಟ್ಟ ಕಡೆಯ ಎಚ್ಚರಿಕೆಯಾಗಿದೆ ಎಂದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement