ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಅಡಿಕೆ ಬೆಳೆಗಾರರಿಗೆ ಸಹಾಯಧನ ಘೋಷಣೆ

ರಾಜ್ಯದಲ್ಲಿ ಗುಟ್ಕಾ ನಿಷೇಧದ ಹಿನ್ನೆಲೆಯಲ್ಲಿ ಅಡಿಕೆ ಬೆಳೆಗಾರರಿಗೆ ಪರ್ಯಾಯ ಬೆಳೆ ಬೆಳೆಯಲು ಸರ್ಕಾರ ಸಹಾಯಧನ ಘೋಷಣೆ..

Lingaraj Badiger
Updated On : 6 Jun 2013, 4:19 am

ಬೆಂಗಳೂರು: ರಾಜ್ಯದಲ್ಲಿ ಗುಟ್ಕಾ ನಿಷೇಧದ ಹಿನ್ನೆಲೆಯಲ್ಲಿ ಅಡಿಕೆ ಬೆಳೆಗಾರರಿಗೆ ಪರ್ಯಾಯ ಬೆಳೆ ಬೆಳೆಯಲು ಸರ್ಕಾರ ಗುರುವಾರ ಸಹಾಯಧನ ಘೋಷಣೆ ಮಾಡಿದೆ.

ಈ ಕುರಿತು ಇಂದು ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರೋಗ್ಯ ಸಚಿವ ಯು.ಟಿ.ಖಾದರ್ ಹಾಗೂ ತೋಟಗಾರಿಕೆ ಸಚಿವ ಶಾಮನೂರು ಶಿವಶಂಕರಪ್ಪ ಅವರು, ಗುಟ್ಕಾ ನಿಷೇಧದಿಂದ ಅಡಿಕೆ ಬೆಲೆ ಕಡಿಮೆಯಾಗಿಲ್ಲ ಮತ್ತು ನಿಷೇಧದಿಂದ ಅಡಿಕೆ ಬೆಳೆಗಾರರಿಗೆ ಯಾವುದೇ ತೊಂದರೆಯಾಗಿಲ್ಲ. ಒಂದು ವೇಳೆ ಅವರು ಅಡಿಕೆ ಬದಲು ಪರ್ಯಾಯ ಬೆಳೆ ಬೆಳೆಯಲು ಬಯಸಿದ್ದಲ್ಲಿ ಸರ್ಕಾರ ಸಹಾಯಧನ ನೀಡಲಿದೆ ಎಂದು ಹೇಳಿದರು.

ಕಷ್ಟದಲ್ಲಿರುವ ಅಡಿಕೆ ಬೆಳೆಗಾರರ ನೆರವಿಗೆ ಸರ್ಕಾರ ಧಾವಿಸಲಿದ್ದು, ಪರ್ಯಾಯ ಬೆಳೆಗಾಗಿ ಸರ್ಕಾರ ಪ್ರತಿ ಎಕರೆಗೆ 40 ಸಾವಿರ ರುಪಾಯಿ ಸಹಾಯಧನ ನೀಡಲಿದೆ ಎಂದು ಸಚಿವ ಯು.ಟಿ.ಖಾದರ್ ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement