ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಈಗಿನ ಸುದ್ದಿ

ಸ್ಪಾಟ್ ಫಿಕ್ಸಿಂಗ್: ತಪ್ಪೊಪ್ಪಿಕೊಂಡ ರಾಜ್ ಕುಂದ್ರಾ

ಬೆಟ್ಟಿಂಗ್ ಹಾಗೂ ಸ್ಪಾಟ್ ಫಿಕ್ಸಿಂಗ್ ಪ್ರಕರಣ ಸಂಬಂಧ ವಿಚಾರಣೆಗೆ ಒಳಗಾಗಿರುವ ಐಪಿಎಲ್ ಫ್ರಾಂಚೈಸಿ,..

Lingaraj Badiger
Updated On : 6 Jun 2013, 2:26 am

ನವದೆಹಲಿ: ಬೆಟ್ಟಿಂಗ್ ಹಾಗೂ ಸ್ಪಾಟ್ ಫಿಕ್ಸಿಂಗ್ ಪ್ರಕರಣ ಸಂಬಂಧ ವಿಚಾರಣೆಗೆ ಒಳಗಾಗಿರುವ ಐಪಿಎಲ್ ಫ್ರಾಂಚೈಸಿ, ರಾಜಸ್ಥಾನ ರಾಯಲ್ಸ್ ತಂಡದ ಮಾಲೀಕ ರಾಜ್ ಕುಂದ್ರಾ ಅವರು ತಪ್ಪೊಪ್ಪಿಕೊಂಡಿದ್ದಾರೆ ಎಂದು ದೆಹಲಿ ಪೊಲೀಸ್ ಆಯುಕ್ತ ನೀರಜ್ ಕುಮಾರ್ ಅವರು ಗುರುವಾರ ಹೇಳಿದ್ದಾರೆ.

ನಿನ್ನೆಯಿಂದ ಸತತ 12 ಗಂಟೆಗಳ ಕಾಲ ಕುಂದ್ರಾ ಅವರನ್ನು ದೆಹಲಿ ಪೊಲೀಸರು ವಿಚಾರಣೆಗೆ ಒಳಪಡಿಸಿದ್ದು, ವಿಚಾರಣೆ ವೇಳೆ ತಮ್ಮ ತಂಡದ ಮೇಲೆಯೇ ಕುಂದ್ರಾ ಅವರು ಬೆಟ್ಟಿಂಗ್ ನಡೆಸಿದ್ದಾಗಿ ತಪ್ಪೊಪ್ಪಿಕೊಂಡಿದ್ದಾರೆ ಎಂದು ಕುಮಾರ್ ವರದಿಗಾರರಿಗೆ ತಿಳಿಸಿದ್ದಾರೆ.

ತಮ್ಮ ಬ್ಯುಸಿನೆಸ್ ಪಾರ್ಟ್‌ನರ್ ಆಗಿರುವ ಉಮೇಶ್ ಗೋಯಾಂಕ ಅವರ ಮೂಲಕ ಕುಂದ್ರಾ ಬೆಟ್ಟಿಂಗ್ ನಡೆಸುತ್ತಿದ್ದರು. ಈ ಬೆಟ್ಟಿಂಗ್‌ನಲ್ಲಿ ಅವರು ಸಾಕಷ್ಟು ಹಣ ಸಹ ಕಳೆದುಕೊಂಡಿದ್ದಾಗಿ ಪೊಲೀಸರಿಗೆ ತಿಳಿಸಿದ್ದಾರೆ ಎಂದು ಆಯುಕ್ತರು ಹೇಳಿದ್ದಾರೆ.

ಇನ್ನು ಪ್ರಕರಣ ಸಂಬಂಧ ಪಾಸ್‌ಪೋರ್ಟ್‌ನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದು, ಪ್ರಕರಣದ ತನಿಖೆ ಮುಗಿಯುವವರೆಗೆ ದೇಶ ಬಿಟ್ಟು ಹೋಗದಂತೆ ಸೂಚಿಸಿಲಾಗಿದ್ದು, ಹೆಚ್ಚಿನ ವಿಚಾರಣೆಗಾಗಿ ಕುಂದ್ರಾ ಅವರನ್ನು ಬಂಧಿಸುವ ಸಾಧ್ಯತೆ ಇದೆ.

ಫಿಕ್ಸಿಂಗ್ ಪ್ರಕರಣ ಸಂಬಂಧ ಬಂಧನಕ್ಕೊಳಗಾಗಿರುವ ರಾಜಸ್ಥಾನ ರಾಯಲ್ಸ್ ತಂಡದ ಆಟಗಾರರಾದ ಎಸ್.ಶ್ರೀಶಾಂತ್, ಅಜಿತ್ ಚಾಂಡಿಲ್ ಹಾಗೂ ಅಂಕಿತ್ ಚೌಹಾಣ್ ಅವರು ಸ್ಪಾಟ್ ಫಕ್ಸಿಂಗ್ ಷಡ್ಯಂತ್ರವನ್ನು ರಾಜ್ ಕುಂದ್ರಾ ಅವರ ಗಮನಕ್ಕೆ ತಂದಿದ್ದರೇ ಎಂಬುದನ್ನು ಪೊಲೀಸರು ಪ್ರಶ್ನಿಸಿದ್ದಾರೆ ಎನ್ನಲಾಗಿದೆ.

ಈ ಮಧ್ಯೆ, ಮಾಧ್ಯಮಗಳ ಮೇಲೆ ಕಿಡಿ ಕಾರಿರುವ ಕುಂದ್ರಾ ಪತ್ನಿ ಹಾಗೂ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಅವರು, ನಾವು ಯಾವುದೇ ತಪ್ಪು ಮಾಡಿಲ್ಲ. ಮಾಧ್ಯಮಗಳು ಜನತೆಗೆ ತಪ್ಪು ಮಾಹಿತಿ ನೀಡುತ್ತಿವೆ ಮತ್ತು ಉಮೇಶ್ ಗೋಯಾಂಕ್ ಅವರು ತಮ್ಮ ಪತಿಯ ಹೆಸರನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement